ಕುಂದಾಪುರ: ಖ್ಯಾತ ಡ್ರಮ್ ವಾದಕ ಶಿವಮಣಿ ಕೊಲ್ಲೂರಿಗೆ ಆಗಮಿಸಿ ಶ್ರೀದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಭರತನಾಟ್ಯ ಪ್ರದರ್ಶನದ ನಡುವೆ ಡ್ರಮ್ ಬಾರಿಸುವುದರ ಮೂಲಕ ದೇವಿಯ ಸೇವೆ ಸಲ್ಲಿಸಿದರು.
ಕಳೆದ ವರ್ಷವೂ ನವರಾತ್ರಿ ಸಂದರ್ಭದಲ್ಲಿ ಶಿವಮಣಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಿವಮಣಿ ಅವರನ್ನು ಕಾಣಲು ಮತ್ತು ಅವರ ಡ್ರಂ ವಾದನ ಕೇಳಲು ಹಲವು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ದೇವಳದ ವತಿಯಿಂದ ಇವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ್ರಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಈ ಸಂದರ್ಭ ಇದ್ದ್ದರು.


