ಕರಾವಳಿ

ಇಲಾಖೆಯನ್ನು ಕಾದರೇ ಕೆಲಸ ಆಗೊಲ್ಲ: ದೊಡ್ಡಹಿತ್ಲು ರಸ್ತೆ ದುರಸ್ಥಿಗಿಳಿದ ಸಾರ್ವಜನಿಕರು

Pinterest LinkedIn Tumblr

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡಹಿತ್ಲು ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ಥಿ ಬಗ್ಗೆ ಸ್ಥಳೀಯ ಶಾಸಕರು, ಜಿಪಂ., ತಾಪಂ. ಹಾಗೂ ಗ್ರಾಪಂ.ಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನಲೆಯಲ್ಲಿ ಸ್ಥಳೀಯ ನಾಗರಿಕರು ಇಂದು ರಸ್ತೆಗಿಳಿದು ದೊಡ್ಡಹಿತ್ಲು ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ಥಿಪಡಿಸಿದ್ದಾರೆ.

Gangolli_road_repair
ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್, ಕ್ರಾಂತಿವೀರರ ಅಭಿಮಾನಿ ಬಳಗ ಹಾಗೂ ವೀರ ಸಾವರ್ಕರ್ ದೇಶಪ್ರೇಮಿ ಬಳಗ ಸಂಸ್ಥೆಗಳ ನೇತೃತ್ವದಲ್ಲಿ ಇಂದು ದೊಡ್ಡಹಿತ್ಲು ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ಥಿಪಡಿಸಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಈ ರಸ್ತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದ್ದು, ಇದೀಗ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಹೀಗಾಗಿ ಈ ರಸ್ತೆಯನ್ನು ದುರಸ್ಥಿಪಡಿಸುವಂತೆ ಶಾಸಕರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿತ್ತು. ಆದರೆ ಈವರೆಗೆ ಯಾರೂ ಈ ರಸ್ತೆ ದುರಸ್ಥಿ ಬಗ್ಗೆ ಕ್ರಮಕೈಗೊಂಡಿಲ್ಲ.

ಆದ್ದರಿಂದ ಸ್ಥಳೀಯ ಗ್ರಾಮಸ್ಥರೇ ಸೇರಿಕೊಂಡು ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ಥಿಪಡಿಸಿದ್ದೇವೆ ಎಂದು ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Write A Comment