ಕರಾವಳಿ

ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಬಸ್ ಕಂಡೆಕ್ಟರ್‌ನ ಸೆರೆ

Pinterest LinkedIn Tumblr

6pdb1

ಪಡುಬಿದ್ರೆ, ಅ.6: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಬಸ್ಸಿನ ಕಂಡೆಕ್ಟರ್ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಂಡೆಕ್ಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮುಲ್ಕಿ ಮೈಲೋಟ್ಟು ನಿವಾಸಿ ರಾಜೇಶ್ ಶೆಟ್ಟಿ (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಮುಲ್ಕಿಯ ಸಾಲ್ಯಾನ್ ಬಸ್ಸಿನಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದು, ಕಳೆದ ಐದು ದಿನಗಳಿಂದ ಕೆಲಸಕ್ಕೆಂದು ಬಾಲಕಿ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಳು. ಅ.5ರಂದು ಬಸ್ಸಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್‌ನ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳಲು ಹೇಳಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದ್ದು, ಇಂದು ಮತ್ತೆ ಆಕೆಯನ್ನು ಕಂಡ ಕಂಡೆಕ್ಟರ್ ಜೀವ ಬೆದರಿಕೆ ಒಡ್ದಿದಾನೆ. ಬಾಲಕಿ ನೀಡಿದ ದೂರಿನಂತೆ ಆರೋಪಿಯ ವಿರುದ್ಧ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Write A Comment