ಕರಾವಳಿ

ಮುಜುಂಗಾವಿನಲ್ಲಿ `ಪ್ರತಿಭಾ ಭಾರತೀ’

Pinterest LinkedIn Tumblr

vdhy_bharathi_photo_1

ಕುಂಬಳೆ: ವೇದಿಕೆಯ ಮೇಲೆ ನಿಂತು ಮಾತನಾಡುವುದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯವನ್ನು ತಂದುಕೊಡುತ್ತದೆ, ಹೆಚ್ಚಿದ ಆತ್ಮವಿಶ್ವಾಸ ಹಲವು ಸಾಧನೆಗಳಿಗೆ ನಾಂದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬೇಕು” ಎಂದು ಕೃಷಿಕ ಪಂಜೆ ದಯಾನಂದ ಭಟ್ ಅಭಿಪ್ರಾಯಪಟ್ಟರು. ಅವರು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆದ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

vdhy_bharathi_photo_3 vdhy_bharathi_photo_2

ವಿದ್ಯಾರ್ಥಿ ಪುನೀತ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ದೀಕ್ಷಾ.ಎಸ್ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ನವ್ಯಶ್ರೀ ಸ್ವಾಗತಿಸಿ ಜಯಶ್ರೀ ವಂದಿಸಿದರು. ಭಾವನಾ ಮತ್ತು ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.

Write A Comment