ಕರಾವಳಿ

ತುಂಬೆ : ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ.

Pinterest LinkedIn Tumblr

vally_ball_photo_a

ತುಂಬೆ, ಅ.30: ತುಂಬೆ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ದ.ಕ. ಜಿಲ್ಲಾಮಟ್ಟದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರ ಪ್ರಥಮ, ಪುತ್ತೂರು ತಾಲೂಕು ತಂಡ ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಪ್ರಥಮ ಮತ್ತು ಮಂಗಳೂರು ತಾಲೂಕು ದ್ವಿತೀಯ ಸ್ಥಾನವನ್ನು ಗಳಿಸಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ವಹಿಸಿದ್ದರು. ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಬೀಫಾತಿಮ ಅಹ್ಮದ್ ಹಾಜಿಯವರು ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ನಫೀಸಾ ಶರೀಫ್, ಬಂಟ್ವಾಳ ಪುರಸಭಾ ಸದಸ್ಯ ರಾಮಕೃಷ್ಣ ಆಳ್ವ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಜೋಸೆಫ್, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಬಿ. ಕೇಶವ, ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಅಧಿಕಾರಿ ಗುರುನಾಥ ಬಾಗೇವಾಡಿ, ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ. ಎನ್. ಗಂಗಾಧರ ಆಳ್ವ, ಮುಖ್ಯೋಪಾಧ್ಯಾಯ ಶ್ರೀನಿವಾಸ್ ಕೆದಿಲ, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ, ಸಾಯಿರಾಂ ಜೆ. ನಾಯಕ್, ಮೋಲಿ ಎಡ್ನಾ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಬಿ. ಅಬ್ದುಲ್ ಕಬೀರ್ ವಂದಿಸಿದರು.

Write A Comment