ಕರಾವಳಿ

ಪತ್ರಿಕಾ ಭವನಕ್ಕೆ ದೇವೇಗೌಡ ಭೇಟಿ.

Pinterest LinkedIn Tumblr

deve_gowda_photo_1

ಮಂಗಳೂರು,ನ.೦5 : ಮಾಜಿ ಪ್ರಧಾನಿ, ಜೆಡಿ‌ಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇ ಗೌಡ ಅವರು ಬುಧವಾರ ನಗರದ ಪತ್ರಿಕಾ ಭವನಕ್ಕೆ ಭೇಟಿ ನೀಡಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ.ಆರ್. ಅವರನ್ನು ಸ್ವಾಗತಿಸಿದರು.

deve_gowda_photo_2

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಭದ್ರವಾಗಿ ನೆಲೆಯೂರಿ ಶಕ್ತಿ ಪಡೆಯಲು ಮಾಧ್ಯಮಗಳು ಕಾರಣವಾಗಿವೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಭೇಟಿಯಾಗಿದ್ದರು. ದೇಶದ ಪ್ರಧಾನಿಯಾಗುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸಿದ್ದವು ಎಂದು ಸ್ವತಃ ಅವರೇ ಹೇಳಿದ್ದರು.

deve_gowda_photo_3a

ಯುಪಿ‌ಎ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತ ಜನತೆ ಒಂದೇ ಪಕ್ಷಕ್ಕೆ ಬಹುಮತ ನೀಡಲು ನಿರ್ಧರಿಸಿದ್ದರು. ಅದರ ಲಾಭವನ್ನು ಬಿಜೆಪಿ ಪಡೆಯಿತು. ಪ್ರಧಾನ ಮಂತ್ರಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ನಾನು ಒಳ್ಳೆಯ ಕೆಲಸ ಮಾಡಿದ್ದೆ. ಆದರೆ ಆಗ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಪಡೆಯುವುದು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

Write A Comment