ಉಡುಪಿ: ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಅವರಿಗೆ ನೂತನ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾಡಳಿತ ಆತ್ಮೀಯ ಬೀಳ್ಕೊಡುಗೆ ಸಮಾರಂಭ ಆಯೋಜಿಸಿತ್ತು.
ಅಪರ ಜಿಲ್ಲಾಧಿಕಾರಿ ಕುಮಾರ್ ರವರು ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಬೆರೆತು ಕಾರ್ಯಕ್ಷಮತೆ ವೃದ್ಧಿಸುವ ನಿಟ್ಟಿನಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಆಯೋಜಿಸಲ್ಪಟ್ಟ ಗಾಂಧಿಜಯಂತಿಯನ್ನು ಸ್ಮರಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಅವರು, ಕಾರ್ಕಳ ಎಎಸ್ ಪಿ ಅಣ್ಣಾಮಲೈ ಅವರು ಜಿಲ್ಲಾಧಿಕಾರಿಗಳೊಂದಿಗಿನ ಎರಡು ತಿಂಗಳ ಒಡನಾಟವನ್ನು ಸ್ಮರಿಸಿದರು. ಜಿಲ್ಲಾಧಿಕಾರಿಗಳ ಪತ್ನಿ ಪರಿಣಿತ ಅವರು, ಉಪವಿಭಾಗಾಧಿಕಾರಿ ಚಾರುಲತಾ ಸೋಮಲ್ ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ ವಿಶಾಲ್ ಅವರು, ಸರ್ಕಾರದ ಅತಿ ಪ್ರಮುಖ ಯೋಜನೆ ಅನ್ನಭಾಗ್ಯ ಅನುಷ್ಠಾನಕ್ಕೆ ತೆರಳುತ್ತಿರುವ ಜಿಲ್ಲಾಧಿಕಾರಿಗೆ ಶುಭಕೋರಿದರಲ್ಲದೆ, ಅವರು ಕೈಗಾರಿಕ ಇಲಾಖೆಯಲ್ಲಿ ನೀತಿ ನಿರೂಪಣೆ ರೂಪಿಸುವಲ್ಲಿ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಎಲ್ಲ ಅಧಿಕಾರಿಗಳು ಸಭೆಯಲ್ಲಿದ್ದರು.