ಕಾಪು ವಿಧಾನಸಭಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಾಗಿ ಸಂಬಂದಪಟ್ಟ ಇಲಾಖೆಗಳಿಂದ ಒಟ್ಟು ರೂ.1.5 ಕೋಟಿಯ ಬೇಡಿಕೆ ಇದ್ದು, ಅದಕ್ಕಾಗಿ ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ತಾಲೂಕು ಕಾರ್ಯಪಡೆ (ಟಾಸ್ಕ್ಪೋಸರ್್) ಕ್ರಿಯಾ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಪು ತಾಲೂಕು ಕ್ರಿಯಾ ಯೋಜನೆ ಸಮಿತಿಗೆ ಈಗಾಗಲೇ ರೂ.61.3 ಲಕ್ಷ ರೂ ಗಳ ಅನುದಾನ ಇದೆ ಆದರೆ ವಿವಿಧ ಗ್ರಾಮ ಪಂಚಾಯತ್ಗಳ ಭೇಟಿ ಸಂದರ್ಭದಲ್ಲಿ ಬಂದಿರುವ ಮನವಿಗಳನ್ನು ಪರಿಗಣಿಸಿ ಹೊಸ ಪ್ರಸ್ತಾವನೆಯನ್ನು ಸಿದ್ದಪಡಿಸಿದ್ದು, ಅಭಿವೃದ್ಧಿ ಕಾಮಗಾರಿಗಳಿಗಾಗಿ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೆ ಸಂಬಂಧಪಟ್ಟ ಸಚಿವರೊಂದಿಗೆ ಚಚರ್ಿಸಲಾಗುವುದು ಎಂದರು.
ಕಾಪು ವಿಧಾನ ಸಭಾ ವ್ಯಾಪ್ತಿಯಲ್ಲಿ 4 ಗ್ರಾಮಗಳನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ಅಳವಡಿಸಿದ್ದು ಈ ಗ್ರಾಮಗಳ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದ ಸಚಿವರು ಕಾಪು ವಿಧಾನಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಮನೆ ನಿವೇಶನಕ್ಕಾಗಿ ಅಜರ್ಿ ಸಲ್ಲಿಸಿದವರಿಗೆ ನಿವೇಶನ ನೀಡುವ ಕಾರ್ಯ ಅಭಿವೃದ್ಧಿಯಲ್ಲಿದ್ದು, ಗ್ರಾಮ ಪಂಚಾಯತ್ ಗಳಲ್ಲಿನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಅಲೆವೂರಿನಲ್ಲಿ ಆಧುನಿಕ ಸಂಸ್ಕರಣಾ ಘಟಕ ಪ್ರಾರಂಭಿಸಲಾಗುವುದು ಎಂದರು.
ಕಾಪು ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜುಗೆ ಈಗಾಗಲೇ ರೂ.51 ಕೋಟಿ ಗಳ ಯೋಜನೆ ತಯಾರಿಸಿದ್ದು, ಒಳಚರಂಡಿ ಕಾಮಗಾರಿಗಾಗಿ ರೂ. 32 ಕೋಟಿ ಯ ಯೋಜನೆಗೆ ಒಪ್ಪಿಗೆ ದೊರೆತಿದ್ದು, ಮುಂದಿನ 25 ವರ್ಷಗಳ ಅಭಿವೃದ್ಧಿಯನ್ನು ದೃಷ್ಠಿಯಲ್ಲಿರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಹಿರಿಯಡ್ಕದಲ್ಲಿ ಈಗಾಗಲೇ ನಾಡ ಕಚೇರಿಗೆ ಮಂಜೂರಾತಿ ದೊರೆತಿದ್ದು, ಶಿರ್ವದಲ್ಲಿ ನಾಡ ಕಚೇರಿ ಪ್ರಾರಂಭಿಸುವ ಕುರಿತು ರಾಜ್ಯದ ಕಂದಾಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಒಪ್ಪಿಗೆ ದೊರೆಯಲಿದೆ , ಬ್ರಹ್ಮಾವರ ಮತ್ತು ಬೈಂದೂರು ತಾಲೂಕು ಕೇಂದ್ರಗಳಾದ ನಂತರದಲ್ಲಿ ಉಡುಪಿಯಲ್ಲಿ ಉಪ ವಿಭಾಗ ಕಚೇರಿ ತೆರೆಯಲು ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸುನೀತಾ ನಾಯಕ್, ಉಪಾಧ್ಯಕ್ಷ ಗಣೇಶ್ ಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ನಾಯಕ್ , ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಬೇಕಲ್, ಕಾರ್ಯ ನಿವರ್ಾಹಕ ಇಂಜಿನಿಯರ್ ಉಮಾ ಶಂಕರ್ ಹಾಗೂ ಕಾಪು ವಿಧಾನ ಸಭಾ ವ್ಯಾಪ್ತಿಯ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.