ಕರಾವಳಿ

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಆರನೇ ದಿನಕ್ಕೆ ಮುಂದರಿಕೆ; ಸಚಿವರ ಭೇಟಿ: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಸ್ಪಂದಿಸುವ ಭರವಸೆ : ಇಬ್ಬರು ಸಹಾಯಕಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

Pinterest LinkedIn Tumblr

KND_FEB.7_1(1)

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಹಾಗೂ ನಗರಾಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸಒರಕೆ ಹೇಳಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರಾಜ್ಯ ಸಮಿತಿ ನೀಡಿದ ಕರೆಯಂತೆ ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಕುಂದಾಪುರ ತಾಲೂಕು ಕಚೇರಿಯ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಆರನೇ ದಿನಕ್ಕೆ ಕಾಲಿರಿಸಿದ ಸಂದರ್ಭ ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆಗಳ ಕಾಮಗಾರಿ ಉದ್ಘಾಟನೆ ಮಾಡಲು ಆಗಮಿಸಿದ ಸಂದರ್ಭ ಧರಣಿ ನಿರತರನ್ನು ಭೇಟಿ ಮಾಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವರು, ಎಲ್ಲಾ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಲ್ಲದೇ ಆರೋಗ್ಯ ಭದ್ರತೆ ನೀಡುವ ಬಗ್ಗೆಯೂ ಭರವಸೆ ನೀಡಿದರು.

KND_FEB.7_1(3)

KND_FEB.7_1(2)

ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ ಅತ್ಯಂತ ಕೆಳಹಂತದಲ್ಲಿ ಮಕ್ಕಳಿಗೆ ಭವಿಷ್ಯ ರೂಪಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪರವಾಗಿ ರಾಜ್ಯ ಸರ್ಕಾರ ಬೆಂಬಲ ನೀಡಲಿದೆ ಎಂದರು.

ಈ ಸಂದರ್ಭ ಕುಂದಾಫುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಕೆ, ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್, ಉಪವಿಭಾಗಾಧಿಕಾರಿ ಚಾರುಲತಾ ಸೋಮಲ್, ತಹಸೀಲ್ದಾರ್ ಗಾಯತ್ರಿ ನಾಯಕ್, ಪುರಸಭಾಧ್ಯಕ್ಷೆ ಯು.ಎಸ್.ಕಲಾವತಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಬೇಡಿಕೆಗಳನ್ನು ಸಚಿವರಿಗೆ ನೀಡಿದರು.

ಇಬ್ಬರು ಅಸ್ವಸ್ಥ : ನಿರಂತರ ಧರಣಿಯ ಪರಿಣಾಮ ಇಬ್ಬರು ಅಂಗನವಾಡಿ ಸಹಾಯಕಿಯರು ಅಸ್ವಸ್ಥರಾದ ಘಟನೆ ಶನಿವಾರ ನಡೆದಿದೆ. ಅಸ್ವಸ್ಥರನ್ನು ಹೇರಿಕುದ್ರು ಅಂಗನವಾಡಿಯ ಸಹಾಯಕಿ ಸುಮತಿ ಹಾಗೂ ರಾಜಾಡಿ ಅಂಗನವಾಡಿ ಕೇಂದ್ರದ ಸಹಾಯಕಿ ಜಯಲಕ್ಷ್ಮೀ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಕುಂದಾಪುರದ ಸರ್ಕಾರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಧರಣಿ ನಿರತ ವೇಳೆ ತಲೆ ತಿರುಗಿ ಬಿದ್ದ ಪರಿಣಾಮ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Write A Comment