ಕುಂದಾಪುರ; ಅರ್ಕುಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮನೆ ನಿವೇಶನ ಹಾಗೂ ಶೌಚಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ನೇತ್ರತ್ವದಲ್ಲಿ ಸಾರ್ವಜನಿಕರು ಕರ್ಕುಂಜೆ ಗ್ರಾ.ಪಂ. ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಕರ್ಕುಂಜೆ ಗ್ರಾ.ಪಂ. ವ್ಯಾಪ್ತಿಯ ಕರ್ಕುಂಜೆ ಹಾಗು ಗುಲ್ವಾಡಿ ಗ್ರಾಮಗಳ ಬಡ ಜನತಾ ಕಾಲೋನಿ ನಿವಾಸಿಗಳಿಗೆ ಕುಡಿಯುವ ನೀರು, ನಿವೆಶನದ ಹಕ್ಕುಪತ್ರ ಹಾಗು ಶೌಚಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ಕೊಡಿಸಲು ಆಗ್ರಹಿಸಿ ಈ ಪ್ರತಿಭಟನೆ ನಡೆಯಿತು.
ವಾಸದ ಮನೆಗಳಿಗೆ ನಳ್ಳಿ ನೀರಿನ ಟ್ಯಾಪ್ ಸಂಪರ್ಕ ಪಡೆಯಲು ಪಂಚಾಯತಿಗೆ ಹಣ ಪಾವತಿಸಿ ವರ್ಷ ಕಳೆದರೂ ಮನೆಯ ನಳ್ಳಿ ನೀರಿನ ಸಂಪರ್ಕಕ್ಕೆ ಈವರೆಗೂ ಕುಡಿಯುವ ನೀರು ಸರಬರಾಜು ಮಾಡದೇ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದ ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಕಾರ್ಯದರ್ಶಿ ವೆಂಕಟೇಶ ಕೋಣಿ ಅವರು ಈ ಕೂಡಲೆ ಕುಡಿಯುವ ನೀರಿಗಾಗಿ ಶಾಶ್ವತ ಯೋಜನೆಯನ್ನು ರೂಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಗ್ರಾ.ಪಂ. ಅಬ್ಥಿವೃದ್ಧಿ ಅಧಿಕಾರಿ ರಿಯಾಜ್ ಅಹಮ್ಮದ್ ಅವರಿಗೆ ಪ್ರತಿಭಟನಾಕಾರರು ಮನವಿ ನೀಡಿದರು.