ಕರಾವಳಿ

ಶ್ರೀ ಕ್ಷೇತ್ರ ಕಮಲಶಿಲೆಗೆ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಭೇಟಿ

Pinterest LinkedIn Tumblr

Kamalashile Temple

ಕುಂದಾಪುರ: ಪುರಣಾ ಪ್ರಸಿದ್ದವಾದ ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿಯ ದೇವಾಲಯಕ್ಕೆ ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಚಾತ್ರ, ಅನುವಂಶಿಕ ಧರ್ಮದರ್ಶಿಗಳಾದ ಬರೆಗುಂಡಿ ಶ್ರೀನಿವಾಸ ಚಾತ್ರ, ಆಜ್ರಿ ಚಂದ್ರಶೇಖರ ಶೆಟ್ಟಿ ಅವರು ಮಹೇಂದ್ರ ಜೈನ್ ದಂಪತಿಗಳನ್ನು ದೇವಾಲಯಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ನಾಯಕ್, ಸಹಕಾರ ಸಂಘಗಳ ಅಭಿವೃದ್ಧಿ ಅಕಾರಿ ಅರುಣ್‌ಕುಮಾರ್, ಮಾನಂಜೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಎ. ಬಾಲಚಂದ್ರ ಭಟ್ ಮತ್ತು ಮುಖ್ಯ ಕಾರ್ಯನಿರ್ವಾಣಾಕಾರಿ ಶ್ರೀಕಾಂತ ಕನ್ನಂತ ಮತ್ತು ಮೊದಲಾದವರು ಉಪಸ್ಥಿತರಿದರು.

Write A Comment