ಕರಾವಳಿ

ವಿವಿಧ ದೇಶಗಳ ವಿದೇಶಿ ಕರೆನ್ಸಿ ಸಾಗಟಕ್ಕೆ ಯತ್ನ : ವಿಮಾನ ಯಾನಿ ಸೆರೆ – ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ ಕರೆನ್ಸಿ ವಶ

Pinterest LinkedIn Tumblr

Foreign_Currency_Sized

(ಸಾಂದರ್ಭಿಕ ಚಿತ್ರ)

ಮಂಗಳೂರು,ಮೇ.25: ಮಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವನನ್ನು ಅಕ್ರಮವಾಗಿ ವಿದೇಶಿ ಕರೆನ್ಸಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ರವಿವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು  ಆತನಿಂದ ಸೂಕ್ತ ದಾಖಲೆ ಪತ್ರಗಳಿಲ್ಲದೇ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಕಾಸರಗೋಡಿನ ಮೊಗ್ರಲ್ ಪುತ್ತೂರು ನಿವಾಸಿ ಮೊಹಮ್ಮದ್ ಅಲಿ ಪಲ್ಲಿಕುಂಞ(27) ಎಂದು ಹೆಸರಿಸಲಾಗಿದೆ.

ಈತ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದ 3,75,023 ಮೌಲ್ಯದ ವಿವಿಧ ದೇಶಗಳ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಸೌದಿ ಅರೇಬಿಯಾದ 12500 ರಿಯಲ್ಸ್, ಯುಎಇ ಯ 7755 ದಿರ್ ಹಮ್ಸ್, ಕುವೈಟ್ ನ 50 ದಿನ್ನರ್ಸ್, ಕತ್ತಾರ್ ನ 400 ರಿಯಲ್ಸ್ ಒಳಗೊಂಡಿರುವುದಾಗಿ ಹಾಗೂ ಈ ವಿದೇಶಿ ಕರೆನ್ಸಿಯ ಬಗ್ಗೆ ಯಾವುದೇ ಅಧಿಕೃತ ಹಣ ವಿನಿಮಯ ದಾಖಲೆ ಪತ್ರಗಳನ್ನು ಹೊಂದಿಲ್ಲದ ಕಾರಣ ಮೊಹಮ್ಮದ್ ಅಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Write A Comment