ಕರಾವಳಿ

ಮಂಗಳೂರು :ದೋಹಾ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಗಾಂಜಾ ವಶ

Pinterest LinkedIn Tumblr

Airport_Ganja_Smagal_1

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಯಾಣಿಕರೊಬ್ಬರಿಂದ 5 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ನಿವಾಸಿ ಮೊಹಮ್ಮದ್ ಇರ್ಷಾದ್ ಚೆಂಬರಿಕಾ (31) ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ.ಆರೋಪಿಯನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

Airport_Ganja_Smagal_2

ದೋಹಾದಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಮಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಗಾಂಜಾವಿರುವುದು ಪತ್ತೆಯಾಯಿತು.ಪ್ರಕರಣದ ಬಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Write A Comment