ಕರಾವಳಿ

ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ-ಗಡಿನಾಡ ಕನ್ನಡಿಗ ಕಯ್ಯಾರ ಕಿಞ್ಞಣ್ಣ ರೈ ಇನ್ನಿಲ್ಲ: ಕಾಸರಗೋಡಿನ ಬದಿಯಡ್ಕದ ಸ್ವಗೃಹದಲ್ಲಿ ವಿಧಿವಶ

Pinterest LinkedIn Tumblr

Kayyara kinnanna rai-Aug 9_2015-001

ಕಾಸರಗೋಡು: ಕನ್ನಡದ ಖ್ಯಾತ ಸಾಹಿತಿ, ಶತಾಯುಷಿ ನಾಡೋಜ ಪ್ರಶಸ್ತಿ ಪುರಸ್ಕೃತ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ನಿಧನರಾಗಿದ್ದಾರೆ. ಕಾಸರಗೋಡಿನ ಬದಿಯಡ್ಕದ ಸ್ವಗೃಹದಲ್ಲಿ ಭಾನುವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಕಯ್ಯಾರ ಕಿಞ್ಞಣ್ಣ ರೈಗಳು ಮಧ್ಯಾಹ್ನ 3.30 ರ ವೇಳೆಗೆ ಮೃತರಾಗಿದ್ದಾರೆ.ಅವರಿಗೆ 101 ವರ್ಷ ವಯಸ್ಸಾಗಿತ್ತು.

Kayyara kinnanna rai-Aug 9_2015-005

1915ರ ಜೂನ್ 8 ರಂದು ಕೇರಳ ರಾಜ್ಯದಲ್ಲಿರುವ ಕಾಸರಗೋಡಿನ ಪೆರಡಾಲ ಗ್ರಾಮದಲ್ಲಿ ಜನಿಸಿದ್ದರು. ರೈರ ತಂದೆ ದುರ್ಗಪ್ಪ ರೈ ತಾಯಿ ದೇಯಕ್ಕ. ಕಿಞ್ಞಣ್ಣ ರೈ ಸ್ವಾತಂತ್ರ್ಯಸಂಗ್ರಾಮದಲ್ಲಿ ಹೋರಾಡಿದ್ದರು. ಹರಿಜನ ಸೇವಕ ಸಂಘಟನೆಯಲ್ಲಿ ಕೆಲಸ ಮಾಡಿದ್ದು, ಸ್ಥಳೀಯ ಪಂಚಾಯತ್ ಅಧ್ಯಕ್ಷ ಪದವಿಯನ್ನೂ ಅಲಂಕರಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಬಹಳಷ್ಟು ಹೋರಾಟ ಮಾಡಿದ್ದರು.

Kayyara kinnanna rai-Aug 9_2015-003

Kayyara kinnanna rai-Aug 9_2015-007

ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿದ್ವಾನ್ ಪದವಿ ಪಡೆದ ಬಳಿಕ ಕಿಞ್ಞಣ್ಣ ರೈ ಬಿ.ಎ.ಪದವಿಯನ್ನು ಪಡೆದು ಅಧ್ಯಾಪಕ ತರಬೇತಿಯನ್ನು ಪೂರೈಸಿದರು. ಬಳಿಕ ಎಂ.ಎ. ಸ್ನಾತಕೋತ್ತರ ಪದವಿ ಪಡೆದು ಕಾಸರಗೋಡಿನ ಬಳಿಯ ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕನ್ನಡ, ತುಳು, ಕೊಂಕಣಿ ಮತ್ತು ಸಂಸ್ಕೃತ ಭಾಷೆಯಲ್ಲಿ ಸಾಹಿತ್ಯಿಕ ಕೃತಿ, ಕವನಗಳನ್ನು ರಚಿಸಿದ್ದ ರೈ ಅವರು ಮಕ್ಕಳ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದರು.

Kayyara kinnanna rai-Aug 9_2015-004

‘ಕಯ್ಯಾರ ಕಿಞ್ಞಣ್ಣ ರೈ’ಯವರು ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನಲ್ಲದೇ ಒಂದು ತುಳು ಕವನ ಸಂಕಲನವನ್ನೂ ಹೊರ ತಂದಿದ್ದಾರೆ.

Kayyara kinnanna rai-Aug 9_2015-009

Kayyara kinnanna rai-Aug 9_2015-008

1997ರಲ್ಲಿ ಮಂಗಳೂರಿನಲ್ಲಿ ಜರುಗಿದ’ 66 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರಿಗೆ ಶ್ರೇಷ್ಠ ಅಧ್ಯಾಪಕ ರಾಷ್ಟ್ರ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ, ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ಕರ್ನಾಟಕ ಸರಕಾರ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿ ಗೌರವಿಸಿತ್ತು.

Kayyara kinnanna rai-Aug 9_2015-002

Kayyara kinnanna rai-Aug 9_2015-006

ಸನ್ಮಾನ ಸಮಾರಂಭದ ಸಂಗ್ರಹ ಚಿತ್ರ 

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಭಾತ, ರಾಷ್ಟ್ರಬಂಧು ಪತ್ರಿಕೆಗಳಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

Write A Comment