ಕರಾವಳಿ

ಎತ್ತಿನಹೊಳೆ ಯೋಜನೆಗೆ  ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಿಂದ ಮಧ್ಯಂತರ ತಡೆಯಾಜ್ಞೆ

Pinterest LinkedIn Tumblr

Yettina_Hole_Start_1

ಮಂಗಳೂರು, ನವೆಂಬರ್ 19 : ಕರಾವಳಿ ಭಾಗದ ಜನರ ವಿರೋಧಕ್ಕೆ ಕಾರಣವಾಗಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ತಡೆಯಾಜ್ಞೆ ನೀಡಿದೆ. 2015ರ ಡಿಸೆಂಬರ್ 7ರ ತನಕ ಯಾವುದೇ ಕಾಮಗಾರಿಗಳನ್ನು ನಡೆಸದಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಪುರುಷೋತ್ತಮ ಚಿತ್ತಾಪುರ, ವಿಜಯ್ ಕುಮಾರ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಈ ಯೋಜನೆಯಿಂದ ಪಶ್ಚಿಮಘಟ್ಟದಲ್ಲಿನ ಜೀವವೈವಿಧ್ಯಕ್ಕೆ ಧಕ್ಕೆಯಾಗಲಿದೆ ಎಂದು ವಾದ ಮಂಡಿಸಲಾಗಿತ್ತು.

ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠದ ನ್ಯಾಯಮೂರ್ತಿ ಜ್ಯೋತಿರ್ಮಣಿ ಹಾಗೂ ಎಸ್.ಆರ್.ರಾವ್ ಅವರಿದ್ದ ಪೀಠ ಡಿಸೆಂಬರ್ 7ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಕರ್ನಾಟಕ ಸರ್ಕಾರದ ಪರವಾಗಿ ನವೀನ್ ನಾಥ್ ವಾದ ಮಂಡನೆ ಮಾಡಿದ್ದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯದ 7 ಜಿಲ್ಲೆಗಳ 28 ತಾಲ್ಲೂಕುಗಳ 68.5 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿದೆ.

Write A Comment