ಕರಾವಳಿ

ಕರೆಂಟ್ ಶಾಕ್ ಯೂನಿಟ್‌ಗೆ 25 ಪೈಸೆ ಹೆಚ್ಚಳ – ಏಪ್ರಿಲ್‌ನಿಂದ ಜಾರಿ

Pinterest LinkedIn Tumblr

electricity

ಬೆಂಗಳೂರು: ಬರ, ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಬರುವ ಏಪ್ರಿಲ್ ಒಂದರಿಂದ ವಿದ್ಯುತ್ ದರ ಏರಿಕೆಯ ಶಾಕ್ ತಗುಲಲಿದೆ.

ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್‌ಗೆ 20 ರಿಂದ 25 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಇಲ್ಲವೇ ನಾಡಿದ್ದು ಅಧಿಕೃತ ಆದೇಶ ಹೊರಬೀಳಲಿದೆ.

ವಿದ್ಯುತ್ ದರ ಏರಿಕೆಯ ಬಗ್ಗೆ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಏರಿಕೆಯ ಬಗ್ಗೆ ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿವೆ.

ವಿದ್ಯುತ್ ಕಂಪನಿಗಳ ಮನವಿಯ ಪರಿಶೀಲನೆ ನಡೆಸಿರುವ ಕೆಇಆರ್‌ಸಿ ವಿದ್ಯುತ್ ದರ ಏರಿಕೆಯ ಬಗ್ಗೆ ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಿದೆ.

ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಜೆಸ್ಕಾಂ, ಎಚ್‌ಸ್ಕಾಂ, ಚೆಸ್ಕಾಂ, ಮೆಸ್ಕಾಂ ಪ್ರತಿ ಯೂನಿಟ್ ವಿದ್ಯುತ್‌ಗೆ 80 ರಿಂದ 1 ರೂ. 20 ಪೈಸೆ ಹೆಚ್ಚಳ ಮಾಡುವಂತೆ ಆಯೋಗಕ್ಕೆ ಮನವಿ ಸಲ್ಲಿಸಿದ್ದು, ಆಯೋಗ ಇದಕ್ಕೆ ಸಮ್ಮತಿಸಿಲ್ಲ. ಆದರೆ ಪ್ರತಿ ಯೂನಿಟ್‌ಗೆ 20 ರಿಂದ 25 ಪೈಸೆ ಹೆಚ್ಚಳ ಮಾಡಲು ಒಪ್ಪಿಗೆ ನೀಡಿದೆ ಎಂದು ಉನ್ನತ ಮೂಲಗಳು ಹೇಳಿವೆ.

ವಿದ್ಯುತ್ ದರ ಏರಿಕೆಯ ಬಗ್ಗೆ ಎರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬರಲಿದ್ದು, ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಜಾರಿಯಾಗಲಿದೆ.

Write A Comment