ಕರಾವಳಿ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ: ಬೆಸ್ಕಾಂ ಪ್ರತಿ ಯೂನಿಟ್ ಗೆ 48 ಪೈಸೆ ಏರಿಕೆ

Pinterest LinkedIn Tumblr

electricity hike

ಬೆಂಗಳೂರು: ರಾಜ್ಯದ ನಾಗರಿಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದ ಎಲ್ಲಾ ವಿದ್ಯುತ್ ನಿಗಮದ ವ್ಯಾಪ್ತಿಯಲ್ಲೂ ದರ ಹೆಚ್ಚಳ ಮಾಡಲಾಗಿದೆ.

2016-17 ಸಾಲಿಗೆ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ನೂತನ ವಿದ್ಯುತ್ ದರ ಜಾರಿಯಾಗಲಿದೆ. ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್ ಸಿ) ಸೂಚನೆಯನ್ನು ನೀಡಿದೆ.

ಈ ಕುರಿತು ಆಯೋಗದ ಅಧ್ಯಕ್ಷ ಎಂ ಕೆ ಶಂಕರಲಿಂಗೇಗೌಡ ಪ್ರಕಟಣೆ ಹೊರಡಿಸಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ ಹೆಚ್ಚಳವಾಗಿದ್ದು, ಮೆಸ್ಕಾಂ, ಚೆಸ್ಕಾಂ, ಜೆಸ್ಕಾಂ, ಹೆಸ್ಕಾಂ ವ್ಯಾಪ್ತಿಯಲ್ಲೂ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.

ಹುಕ್ಕೇರಿ ವಿದ್ಯುತ್ ಸರಬರಾಜು ಕಂಪನಿ 38 ಪೈಸೆ, ಮಂಗಳೂರು ಎಸ್ ಇಝಡ್ ವ್ಯಾಪ್ತಿ 6.05 ಪೈಸೆ, ಮಂಗಳೂರು ಏಕಸ್ ಕಂಪನಿ ವ್ಯಾಪ್ತಿಯಲ್ಲಿ 6.55 ಪೈಸೆ ಹಾಗೂ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಯೂನಿಟ್ ಗೆ 48 ಪೈಸೆ ಹೆಚ್ಚಳ ಮಾಡಿ, ಸರಾಸರಿ ರಾಜ್ಯದಲ್ಲಿ ಶೇ.9ರಷ್ಟು ವಿದ್ಯುತ್ ದರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Write A Comment