ಕರಾವಳಿ

ಯಡಿಯೂರಪ್ಪಗೆ ರಾಜ್ಯ ಬಿಜೆಪಿ ಸಾರಥ್ಯ ! ಯುಗಾದಿ ಹಬ್ಬದ ಗಿಫ್ಟ್ ನೀಡಿದ ಹೈ ಕಮಾಂಡ್

Pinterest LinkedIn Tumblr

Yeddyurappa1

ಬೆಂಗಳೂರು: ಮಾಜಿ ಸಿಎಂ ಹಾಗೂ ಸಂಸದ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈ ಕಮಾಂಡ್ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ.

ಹಾಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಳ್ಳುವಂತೆ ಹೈಕಮಾಂಡ್ ಆದೇಶ ನೀಡಿದೆ. ಅಧಿಕಾರ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಪ್ರಹ್ಲಾದ್ ಜೋಶಿ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟ ಕಟ್ಟಲಾಗಿದೆ.

ಅಧ್ಯಕ್ಷ ಸ್ಥಾನ ಅಲಂಕರಿಸಲು ಹಲವು ಹಿರಿಯ ನಾಯಕರು ತುದಿಗಾಲಲ್ಲಿ ನಿಂತಿದ್ದರು. ಸಿ.ಟಿ ರವಿ, ಸೇರಿದಂತೆ ಹಲವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಅಂತಿಮವಾಗಿ ಯಡಿಯೂರಪ್ಪ ಅವರಿಗೆ ಅಧ್ಯಕ್ಷ ಗಾದಿ ಒಲಿದಿದೆ.

Write A Comment