ಕರಾವಳಿ

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Pinterest LinkedIn Tumblr

Result

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2016ರ ಏಪ್ರಿಲ್‌ನಲ್ಲಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 16ರಂದು) ಮಧ್ಯಾಹ್ನ 3ಕ್ಕೆ ಪ್ರಕಟಿಸಲಿದೆ. ಅಂತರ್ಜಾಲ ತಾಣಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಪ್ರೌಢ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿರುವಂತೆ ನಾಳೆ ಮಧ್ಯಾಹ್ನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲ್ಲಿದ್ದು, ಮಧ್ಯಾಹ್ನ 3ಗಂಟೆಗೆ ಕರೆಯಲಾಗಿರುವ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಸಂಜೆ 4 ಗಂಟೆಯ ಬಳಿಕ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದ್ದು, ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ವೆಬ್‌ಸೈಟ್‌ ವಿಳಾಸ: www.kseeb.kar.nic.in ಹಾಗೂ http://kar.results.nic.in,     http://www.karresults.nic.in/

* ವಿದ್ಯಾರ್ಥಿಗಳು 16ರ ಮಧ್ಯಾಹ್ನ 3ರ ನಂತರ ಅಂತರ್ಜಾಲದಲ್ಲಿ ಪಡೆಯಬಹುದು. ವೆಬ್‌ಸೈಟ್‌ ವಿಳಾಸ: www.kseeb.kar.nic.in ಹಾಗೂ http://kar.results.nic.in,     http://www.karresults.nic.in/

* ವಿವರವಾದ ಫಲಿತಾಂಶವನ್ನು ಮೇ 17ರಂದು ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದ ಬೋಪಣ್ಣ ಅವರು ಪ್ರಕರಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಮೊಬೈಲ್‌ ಮೆಸೇಜ್‌ ಮೂಲಕವಾಗಿ ಅಥವಾ ಖಾಸಗಿ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Write A Comment