ಕರಾವಳಿ

ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Pinterest LinkedIn Tumblr

sslc232

ಬೆಂಗಳೂರು, ಮೇ 16: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಿರುವ ಪರೀಕ್ಷಾ ಮಂಡಳಿ ಕೊನೆ ಕ್ಷಣದಲ್ಲಿ ಕೆಲ ಮಾರ್ಪಾಡು ಮಾಡಿದೆ. ಸರ್ಕಾರ ಈವರೆಗೂ ಅಧಿಕೃತವಾಗಿ ಪ್ರಕಟಿಸಲು ತೀರ್ಮಾನಿಸಿದ್ದ ಎರಡು ವೆಬ್‌ಸೈಟನ್ನು ರದ್ದುಪಡಿಸಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ www.kseeb.kar.nic.in & www.kar.resultes.nic.in ಈ ಎರಡು ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪ್ರಕಟಿಸದಿರಲು ತೀರ್ಮಾನಿಸಿದೆ.

ಇದೀಗ ಮಂಡಳಿ ಸ್ಪಷ್ಟಪಡಿಸಿರುವಂತೆ www.sslc.kar.nic.in & www.karresultes.nic.in ಈ ವೆಬ್‌ಸೈಟ್‌ಗಳಲ್ಲಿ ಮಾತ್ರ ಅಧಿಕೃತ ಫಲಿತಾಂಶ ಪ್ರಕಟಗೊಳ್ಳಲಿದೆ. ಇದನ್ನು ಹೊರತು ಪಡಿಸಿ ಬೇರೆ ಯಾವುದೇ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಂಡರೆ ಅದಕ್ಕೆ ಪದವಿ ಪೂರ್ವ ಶಿಕ್ಷಣ ಮಂಡಳಿ ಜವಾಬ್ದಾರಿಯಲ್ಲ. ಪೋಷಕರು ಮತ್ತು ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲೇ ಖಾತರಿಪಡಿಸಿಕೊಳ್ಳಬೇಕೆಂದು ಮಂಡಳಿ ಮನವಿ ಮಾಡಿದೆ.

ಖಾಸಗಿ ವೆಬ್‌ಸೈಟ್‌ಗಳಲ್ಲಿ ನಾವು ಫಲಿತಾಂಶವನ್ನು ಪ್ರಕಟಗೊಳಿಸುವುದಿಲ್ಲ. ವಿದ್ಯಾರ್ಥಿಗಳು ಆತುರವಾಗಿ ಕಳೆದ ವರ್ಷದಂತೆ ಖಾಸಗಿ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ನೋಡಿಕೊಂಡು ವ್ಯತ್ಯಾಸವಾದರೆ ಗೊಂದಕ್ಕೆ ಈಡಾಗಬಾರದು. ಸರ್ಕಾರ ಅಧಿಕೃತವಾಗಿ ಎರಡು ವೆಬ್‌ಸೈಟ್‌ಗಳಲ್ಲಿ ಪ್ರಕಟ ಮಾಡಲಿದೆ. ನಾಳೆ ಸಂಬಂಧಪಟ್ಟ ಶಾಲೆಗಳಲ್ಲಿ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಇಂದು ಮಧ್ಯಾಹ್ನ 3 ಗಂಟೆ ನಂತರ ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಮಾತ್ರ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮಂಡಳಿ ತಿಳಿಸಿದೆ.

Write A Comment