ಕರಾವಳಿ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ: ಬೆಂಗಳೂರು ಗ್ರಾಂ. ಪ್ರಥಮ, ಉಡುಪಿ ದ್ವಿತೀಯ, ಬಳ್ಳಾರಿಗೆ ಕೊನೆಯ ಸ್ಥಾನ; ಶಿವಮೊಗ್ಗ ಜಿಲ್ಲೆಯ ಭದ್ರಾವತಿಯರಂಜನ್ ರಾಜ್ಯಕ್ಕೆ ಪ್ರಥಮ

Pinterest LinkedIn Tumblr

kimmane

ಬೆಂಗಳೂರು: 2015-16ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ದ್ವಿತೀಯ ಹಾಗೂ ಮಂಗಳೂರು ತೃತೀಯ ಸ್ಥಾನ ಪಡೆದಿದೆ. ಇನ್ನೂ ಬಳ್ಳಾರಿ ಜಿಲ್ಲೆ ಈ ಬಾರಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಿಸಿದ್ದು, ಸಂಜೆ ನಾಲ್ಕು 4 ಗಂಟೆಯ ನಂತರ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 82.64ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ. 75.84ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಒಟ್ಟು ಶೇ.79.16ರಷ್ಟು ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಶೇ.2ರಷ್ಟು ಕಡಿಮೆ ಬಂದಿದೆ ಎಂದು ಶಿಕ್ಷಣ ಸಚಿವರು ಹೇಳಿದರು. ಇನ್ನೂ ಮೂರು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದರು.

ಒಟ್ಟಾರೆ 3,01,447  ಬಾಲಕಿಯರು ಉತ್ತೀರ್ಣರಾಗಿದ್ದರೆ, 3,03,088 ಬಾಲಕರು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ರಾಜ್ಯದ ಒಟ್ಟು 52 ಶಾಲೆಗಳಲ್ಲಿ ಶೂನ್ಯ ಸಂಪಾದಿಸಿದ್ದು, ಸರ್ಕಾರಿ 3, ಅನುದಾನ 6, ಅನುದಾನ ರಹಿತ 43 ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ.

ಯಾವ ಜಿಲ್ಲೆಗೆ ಯಾವ ಸ್ಥಾನ?:
ಬೆಂಗಳೂರು ಗ್ರಾಮಾಂತರ ಶೇ. 89.63 ರಷ್ಟು ಫಲಿತಾಂಶ ಪಡೆದು ಅಗ್ರಸ್ಥಾನ ಪಡೆದುಕೊಂಡಿದ್ದರೆ, ಉಡುಪಿ – ಶೇ. 89.52 2ನೇ ಸ್ಥಾನದಲ್ಲಿದೆ. ಇನ್ನು ಮಂಗಳೂರು – ಶೇ. 88.01 3ನೇ ಸ್ಥಾನದಲ್ಲಿದ್ದರೆ, ಬಳ್ಳಾರಿ ಶೇ. 56.68 ಗಳಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದೆ.

ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ಭದ್ರಾವತಿಯ ಪೂರ್ಣ ಪ್ರಜ್ಞಾ ಶಾಲೆಯ ವಿದ್ಯಾರ್ಥಿ ರಂಜನ್ ಎಸ್ ರಾಜ್ಯಕ್ಕೆ ಟಾಪರ್ ಎನಿಸಿಕೊಂಡಿದ್ದಾನೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನಕಲು ಮಾಡಿ 76 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಇನ್ನು ಪೂರಕ ಪರೀಕ್ಷೆ ಜೂನ್ 20 ರಿಂದ 27 ವರೆಗೆ ನಡೆಯಲಿದ್ದು, ಪೂರಕ ಪರೀಕ್ಷೆ ನೊಂದಾಯಿಸಿಕೊಳ್ಳಲು ಮೇ 25 ಕೊನೆಯ ದಿನಾಂಕ ಎಂದು ಕಿಮ್ಮನೆ ಹೇಳಿದ್ದಾರೆ.

ಇದೇ ವೇಳೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಕಿಮ್ಮನೆ ರತ್ನಾಕರ, ಅನುತ್ತೀರ್ಣರಾದವರು ಧೈರ್ಯ ಕಳೆದುಕೊಳ್ಳುವುದು ಬೇಡ. ಜೂನ್ 20ರಂದು ಮರು ಪರೀಕ್ಷೆ ನಡೆಯಲಿದ್ದು ಮತ್ತೊಮ್ಮೆ ಯತ್ನಿಸಿ ಉತ್ತೀರ್ಣರಾಗಿ ಎಂದು ಸಲಹೆ ನೀಡಿದರು.

ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು, karresults.nic.in OR sslc.kar.nic.in, http://kseeb.kar.nic.in/ ಮತ್ತು http://karresults.nic.in/ ಜಾಲತಾಣಗಳ ಮೂಲಕ ಪಡೆಯಬಹುದಾಗಿದೆ.

Write A Comment