ಕರಾವಳಿ

ಮೇ 25ಕ್ಕೆ ಪಿಯುಸಿ ಫಲಿತಾಂಶ ಪ್ರಕಟ

Pinterest LinkedIn Tumblr

puc reslt

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಮೇ 25ಕ್ಕೆ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ ಅಂಕ ಗಳಿಸಿರುವ ರಂಜನ್ನನ್ನು ಸನ್ಮಾನಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಸಿದ್ಧವಾಗಿದೆ ಎಂದರು.

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಮೊದಲೆ ಅಂದರೆ ಮೇ 18ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು 18 ದಿನಗಳ ಕಾಲ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದರಿಂದ ಒಂದು ವಾರ ವಿಳಂಬವಾಗಿದೆ. ಮೌಲ್ಯಮಾಪನಕ್ಕೆ ಹೆಚ್ಚುವರಿ ಉಪನ್ಯಾಸಕರನ್ನು ಬಳಸಿದ್ದರೂ ಫಲಿತಾಂಶ ಪ್ರಕಟ ವಿಳಂಬವಾಗಿದೆ.

Comments are closed.