ಕರಾವಳಿ

ಸ್ತ್ರೀ ಶಕ್ತಿ ಒಕ್ಕೂಟಗಳನ್ನು ಜಿಲ್ಲಾ ಮಟ್ಟದ ಸ್ತ್ರೀ ಶಕ್ತಿ ಒಕ್ಕೂಟಗಳಾಗಿ ಸ್ಥಾಪಿಸಬೇಕು – ಸ್ತ್ರೀಶಕ್ತಿ ಸಮಾವೇಶ ಹಾಗೂ ಕಾರ್ಯಾಗಾರದಲ್ಲಿ ಸಚಿವೆ ಉಮಾಶ್ರೀ

Pinterest LinkedIn Tumblr

twnhall_samvesha_1

ಮಂಗಳೂರು, ಮೇ 28: ರಾಜ್ಯದ ಎಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದ ಸ್ತ್ರೀ ಶಕ್ತಿ ಒಕ್ಕೂಟಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಉಮಾಶ್ರೀ ಹೇಳಿದ್ದಾರೆ.

ನಗರದ ಪುರಭವನದಲ್ಲಿ ಇಂದು ಸ್ತ್ರೀಶಕ್ತಿ ಸಮಾವೇಶ, ಮಾಹಿತಿ ಕಾರ್ಯಾಗಾರ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ತಾಲೂಕು ಸ್ತ್ರೀ ಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಮಾವೇಶ ಹಾಗೂ ಕಾರ್ಯಾಗಾರಕ್ಕೆ ಅವರು ಚಾಲನೆ ನೀಡಿದರು.

ತಾಲೂಕು ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಿಸುವ ಜತೆಗೆ ಜಿಲ್ಲಾ ಮಟ್ಟದ ಒಕ್ಕೂಟಕ್ಕೆ 1 ಲಕ್ಷ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

twnhall_samvesha_2 twnhall_samvesha_3 twnhall_samvesha_4 twnhall_samvesha_5 twnhall_samvesha_6 twnhall_samvesha_7 twnhall_samvesha_8 twnhall_samvesha_9 twnhall_samvesha_10 twnhall_samvesha_11 twnhall_samvesha_12 twnhall_samvesha_13 twnhall_samvesha_14 twnhall_samvesha_15 twnhall_samvesha_16 twnhall_samvesha_17 twnhall_samvesha_18 twnhall_samvesha_19

ಸ್ತ್ರೀಶಕ್ತಿ ಗುಂಪುಗಳು ಮಹಿಳೆಯರಿಗೆ ಹೊಸ ಚೈತನ್ಯವನ್ನು ನೀಡಿರುವುದಲ್ಲದೆ, ಆರ್ಥಿಕ ಸಬಲೀಕರಣ ಹಾಗೂ ಸಾಮಾಜಿಕ ಬದಲಾವಣೆಗೂ ಕಾರಣವಾಗಿದೆ.  ದ.ಕ. ಜಿಲ್ಲೆಯಲ್ಲಿ 3935 ಸ್ತ್ರೀ ಶಕ್ತಿ ಗುಂಪುಗಳಲ್ಲಿ 56000 ಸದಸ್ಯರಿದ್ದಾರೆ. ಈ ಗುಂಪುಗಳು 221 ಕೋಟಿ ರೂ. ಆಂತರಿಕ ಸಾಲ ಪಡೆದುಕೊಂಡು 67.36 ಕೋಟಿ ರೂ. ಉಳಿತಾಯ ಮಾಡಿದ್ದಾರೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಕ್ರೀಡಾ ಸಚಿವ ಅಭಯಚಂದ್ರ ಜೈನ್, ಶಾಸರಾದ ಐವನ್ ಡಿಸೋಜಾ, ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ರಾಜ್ಯ ಮಹಿಳಾ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಅಮರ್ ಆಳ್ವ, ಮೂಡಾ ಅಧ್ಯಕ, ಇಬ್ರಾಹೀಂ ಕೋಡಿಜಾಲ್, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಮಹಿಳಾ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎನ್. ವಿಜಯ ಪ್ರಕಾಶ್, ಸಹಕಾರ ಸಂಘಗಳ ಉಪ ನಿಬಂಧಕ ಸಲೀಂ, ಚಿಕ್ಕಮಗಳೂರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜಯ್ಯ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಲಾಲಿಮಣಿ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Comments are closed.