ಕರಾವಳಿ

ಬಾಳಿಗಾ ಹತ್ಯೆ ಪ್ರಕರಣ : ನರೇಶ್ ಶೈಣೆ ಸ್ನೇಹಿತನ ಬಂಧನ .

Pinterest LinkedIn Tumblr

Baliga_Protest_Meravang_2

ಮಂಗಳೂರು,ಮೇ.30: ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಪಿ. ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ನರೇಶ್ ಶೆಣೈಯ ಸ್ನೇಹಿತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಾಳಿಗ ಕೊಲೆ ಈ ಪ್ರಕರಣಕ್ಕೆ ಸಂಭಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿ ನರೇಶ್ ಶೆಣೈಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸ್ಥಳಿಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತಾ ಆರೋಪಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದ ಮೇಲೆ ಕೆ ಮಂಜುನಾಥ್ ಶೆಣೈ ಯಾನೆ ಮಂಜು ನಿರೇಶ್ವಾಲ್ಯ (39) ರನ್ನು ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ರವರ ತಂಡ ವಶಕ್ಕೆ ಪಡೇದುಕೊಂಡು ಮುಂದಿನ ಕ್ರಮಕ್ಕಾಗಿ ಪ್ರಕರಣ ತನಿಖಾಧಿಕಾರಿಯವರಿಗೆ ಹಸ್ತಾಂತರಿಸಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 4 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ಇದೀಗ ಮೇ 29ರಂದು ಮಂಜು ಎಂಬವರನ್ನು ಬಂಧಿಸುವ ಮೂಲಕ ಈ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಸಂಖೆ 5 ಕ್ಕೇರಿದೆ.

ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಮಾರ್ಚ 21ರಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು,

Comments are closed.