ಉಡುಪಿ: ಹಾರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆಲವೊಂದು ಕಡೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಲಾಗಿದ್ದ ರಸ್ತೆಯ ನಾಮಫಲಕವನ್ನು ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಹಾಳುಗೆಡಹಿದ್ದಾರೆ. ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಿಗ್ಗೆಯ ನಡುವೆ ಈ ಕೃತ್ಯ ಎಸೆಗಿದ್ದು ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪಂಚಾಯಿತಿ ದೂರು ದಾಖಲಿಸಿದೆ.

ಸ್ಥಳೀಯ ರಾಜಕೀಯದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಒಳಗೆ ನಡೆಯುತ್ತಿದ್ದ ಒಳಕುಸ್ತಿಯನ್ನು ಪಂಚಾಯಿತಿ ವ್ಯಾಪ್ತಿಯ ರಸ್ತೆ ನಾಮಫಲಕಗಳನ್ನು ಧ್ವಂಸ ಮಾಡುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ಗ್ರಾಮಸ್ಥರು ಪತ್ರಿಕೆಗೆ ತಿಳಿಸಿದ್ದಾರೆ. ಬುಧವಾರ ಮುಂಜಾನೆ ಈ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೇಮ್ಸ್ ಡಿ ಸಿಲ್ವ ಅವರಿಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬ್ರಹ್ಮಾವರ ಠಾಣೆಗೆ ಈ ಕುರಿತು ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ.
Comments are closed.