
ಮಂಗಳೂರು, ಜೂ.21: ಜಿಲ್ಲಾ ಆಯುಷ್ ಇಲಾಖೆ, ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಮಂಗಳಾ ಕ್ರೀಡಾಂಗಣದ ಒಳಾಂಗಣ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು,ಇದರ ಉದ್ಘಾಟನೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್ ನೇರವೇರಿಸಿದರು.
ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಬೆಳಗ್ಗೆ 9 ಗಂಟೆಯಿಂದ ಒಂದು ಗಂಟೆ ಕಾಲ ನಡೆದ ವಿವಿಧ ಯೋಗ ಆಸನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ವಿವಿಧ ಆಸನಗಳ ಮೂಲಕ ಗಮನ ಸೆಳೆದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಕಾರ್ಯನಿರ್ವಹಣಾಧಿಕಾರಿ ಪಿ.ಐ ಶ್ರೀವಿದ್ಯಾ, ಪೊಲೀಸ್ ಆಯುಕ್ತ ಚಂದ್ರಶೇಖರ್, ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ರಾವ್ ಬೊರಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಡಿಸಿಪಿ ಶಾಂತರಾಜು, ಮನಪಾ ಆಯುಕ್ತ ಡಾ.ಗೋಪಾಲಕೃಷ್ಣ, ಜಿಲ್ಲಾ ಆಯುಷ್ ಅಧಿಕಾರಿ ದೇವದಾಸ್ ಮೊದಲಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
Comments are closed.