ಉಡುಪಿ: ಸಚಿವ ಸ್ಥಾನ ಸಿಕ್ಕದ ಅತೃಪ್ತ ಶಾಸಕರು ಮಾತನಾಡಬೇಕು ಹಾಗೂ ಚರ್ಚೆ ನಡೆಸಬೇಕು ಎಂದು ನನಗೆ ಆಹ್ವಾನ ನೀಡಿದ್ದು ಅವರನ್ನು ಬೆಂಗಳೂರಿನಲ್ಲಿ ಭೇಟಿ ಆಗುತ್ತೇನೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಸಚಿವ ಸಂಪುಟದಿಂದ ವಿನಯ್ ಕುಮಾರ್ ಸೊರಕೆ ಅವರನ್ನು ಕೈಬಿಟ್ಟ ಹಿನ್ನಲೆಯಲ್ಲಿ ಕಾಪುವಿನಲ್ಲಿ ಸೊರಕೆ ಬೆಂಬಲಿಗರು, ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಯಾವುದೇ ಕಾರಣ ನೀಡದೇ , ಕಳಂಕರಹಿತವಾದ ಸೊರಕೆ ಅವರನ್ನು ಸಂಪುಟದಿಂದ ಕೈಬಿಟ್ಟ ಕ್ರಮಕ್ಕೆ ಬೆಂಬಲಿಗರು ಅಸಮಧಾನ ವ್ಯಕ್ತಪಡಿಸಿದರು. ಈ ಸಂದರ್ಬ ಪ್ರತಿಭಟನಾ ಸಭೆಗೆ ಆಗಮಿಸಿದ ಮಾಜಿ ಸಚಿವ ಸೊರಕೆ ಯಾವುದೇ ಕಾರಣಕ್ಕೆ ಪ್ರತಿಭಟನೆ ಮಾಡಬಾರದು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಬದಲ್ಲಿ ಮಾಧ್ಯಮದವರ ಪ್ರಶ್ನೆಗೆ ಮಾತನಾಡಿದ ಅವರು ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನಲೆಯಲ್ಲಿ ನನ್ನ ಮನಸ್ಸಿಗೆ ನೋವಾಗಿದೆ. ಅಧಿಕಾರ ಶಾಶ್ವತ ಅಲ್ಲ ಅಂತ ಗೊತ್ತಿದೆ. ಸೊನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದಾರೆ. ಅವರಿಗೆ ನನ್ನ ಭಾವನೆಯನ್ನು ತಿಳಿಸಿದ್ದೇನೆ ಎಂದರು. ಅತೃಪ್ತ ಶಾಸಕರು ಕರೆ ಮಾಡಿದ್ದಾರೆ. ಮಾತನಾಡಬೇಕು ಎಂದು ಹೇಳಿದ್ದಾರೆ. ಅವರನ್ನು ನಾನು ಬೆಂಗಳೂರಿನಲ್ಲಿ ಭೇಟಿಯಾಗುತ್ತಾನೆ ಎಂದ ಅವರು ದೇವರಾಜ ಅರಸು ಕಾಲದಲ್ಲಿ ಬಿಲ್ಲವರಿಗೆ ಸಂಪುಟದಲ್ಲಿ ಪ್ರಾತಿನಿದ್ಯ ಇತ್ತು. ಸಮುದಾಯಕ್ಕೆ ಬೇಸರವಾಗುವುದು ನಿಜ. ಮುಂದಿನ ವಾರ ಸಿಎಂ ಅವರನ್ನು ಭೇಟಿ ಆಗುತ್ತೇನೆ ಎಂದರು.
Comments are closed.