
ಮಂಗಳೂರು,ಜೂನ್,25 : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳ ಪದ ಸ್ವೀಕಾರ ಮತ್ತು ದ.ರಾ. ಬೇಂದ್ರೆ ವಿಶೇಷ ಉಪನ್ಯಾಸಕಾರ್ಯಕ್ರಮ ಪುತ್ತೂರಿನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಇತ್ತಿಚೆಗೆ ನಡೆಯಿತು.
ಶಾಸಕಿ ಶಕುಂತಳಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಶ್ಯಾಮ ಸುಂದರ ಬಿದರಕುಂದಿ ವಿಶೇಷ ಉಪನ್ಯಾಸ ನೀಡಿದರು.
ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಮನೆ ಮನೆ ಶಾಲೆಗಳಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆ ನಡೆಸುವ ಯೋಜನೆ ಇದೆ ಎಂದರು.
ಕೋಶಾಧಿಕಾರಿ ಎನ್.ಕೆ. ಜಗನ್ನಿವಾಸರಾವ್, ಜಿಲ್ಲಾ ಕಾರ್ಯದರ್ಶಿ ಬಿ. ತಮ್ಮಯ್ಯ, ಹಾಗೂ ಡಾ. ಎಂ.ಪಿ. ಶ್ರೀನಾಥ್, ಪುತ್ತೂರು ಘಟಕದ ನಿಕಟಪೂರ್ವ ಅಧ್ಯಕ್ಷ ಡಾ. ವರದರಾಜ ಚಂದ್ರಗಿರಿ, ಮಂಗಳೂರು ಕಸಾಪದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಮ್ಮೀ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಡಾ. ಶ್ರೀಧರ ಎಚ್.ಜಿ. ಸ್ವಾಗತಿಸಿ, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಿನಿ ಮೇನಾಲ ವಂದಿಸಿದರು.
Comments are closed.