
ಮಂಗಳೂರು, ಜುಲೈ. 1: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕೋಟಿ ವೃಕ್ಷ ಅಭಿಯಾನದಡಿಯಲ್ಲಿ ನಗರ ಹಸಿರೀಕರಣ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಇಂದು ನಗರದ ಲೇಡಿಹಿಲ್ ವೃತ್ತದಲ್ಲಿ ಅರಣ್ಯ ಪರಿಸರ ಮತ್ತು ಜೀವಿ ಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಚಾಲನೆ ನೀಡಿದರು.


ಮಂಗಳೂರು ಮೇಯರ್ ಹರಿನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ನಿಕ್, ಉಪಮೇಯರ್ ಕೆ.ಸುಮಿತ್ರ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮೂಡ ಮಾಜಿ ಅಧ್ಯಕ್ಷ ಬಿ.ಜಿ.ಸುವರ್ಣ, ಕೆ.ಎಸ್.ಆರ್.ಟಿ.ಸಿ ನಿರ್ದೇಶಕ ಟಿ.ಕೆ ಸುಧೀರ್, ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಹಾಗೂ ಮನಪಾ ಸದಸ್ಯರಾದ ನವೀನ್ ಡಿ’ಸೋಜ, ಸಂತೋಷ್ ಶೆಟ್ಟಿ, ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Comments are closed.