
ಮಂಗಳೂರು, ಜುಲೈ.2: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಿ ಆತನಿಂದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಫರಂಗಿಪೇಟೆ ಸಮೀಪದ ಅಡ್ಯಾರ್ ನಿವಾಸಿ ಅಬ್ದುಲ್ ಜಬ್ಬಾರ್ @ ಮಂಗ ಜಬ್ಬಾರ್ (24) ಬಂಧಿತ ಆರೋಪಿ. ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಎದುರುಗಡೆ ಕಪ್ಪು ಬಣ್ಣದ ಸುಜುಕಿ ಅಕ್ಸೆಸ್ ಸ್ಕೂಟರ್ ನಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಸಂದರ್ಭ ಆರೋಪಿಯನ್ನು ಗಾಂಜಾ ಹಾಗೂ ಇತರ ಸೊತ್ತಿನೊಂದಿಗೆ ಬಂಧಿಸಲಾಗಿದೆ.
ಆರೋಪಿಯಿಂದ ಸುಮಾರು 30,000 ರೂ. ಮೌಲ್ಯದ 1. ಕೆಜಿ ಗಾಂಜಾ, ಮೊಬೈಲ್ ಫೋನ್ ಹಾಗೂ ಗಾಂಜಾ ಮಾರಾಟ ಮಾಡಲು ಉಪಯೋಗಿಸುತ್ತಿದ್ದ ಸುಝುಕಿ ಅಕ್ಸೆಸ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 90,000/- ಎನ್ನಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ಅಬ್ದುಲ್ ಜಬ್ಬಾರ್ @ ಮಂಗ ಜಬ್ಬಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 2 ಪ್ರಕರಣಗಳು ದಾಖಲಾಗಿರುತ್ತದೆ.
ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿ’ಸೋಜ ಮತ್ತು ಸಬ್ ಇನ್ಸಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.
ಅಕ್ರಮ ಸಾಗಾಟ: ನಾಲ್ಕು ಸಾವಿರ ಪ್ಯಾಕೆಟ್ ತಂಬಾಕು ಉತ್ಪನ್ನ ವಶ
ಕಾಸರಗೋಡು, ಜು.1: ಕರ್ನಾಟಕದಿಂದ ಕಾಸರಗೋಡಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ಕು ಸಾವಿರ ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ಅಬಕಾರಿ ಅಧಿಕಾರಿಗಳು ಪೆರ್ಲದಲ್ಲಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಣ್ಣೂರಿನ ತುಳಸಿದಾಸ್(35)ನನ್ನು ಬಂಧಿಸಲಾಗಿದೆ. ಕಾಸರಗೋಡು ಅಬಕಾರಿ ಸರ್ಕಲ್ ಇನ್ಸ್‌ಪೆಕ್ಟರ್ ಸಿ. ಮಧುಸೂದನ್ ನೇತೃತ್ವದ ತಂಡವು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಂಬಾಸಿಡರ್ ಕಾರಿನಲ್ಲಿ ಪಾನ್ ಮಸಾಲ ಪತ್ತೆಯಾಗಿದೆ. ಬಂಧಿತ ಆರೋಪಿ ವಿಚಾರಣೆ ವೇಳೆ ಇವುಗಳನ್ನು ವಿವಿಧೆಡೆಗೆ ವಿತರಿಸಲು ಸಾಗಾಟ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
Comments are closed.