
ಮಂಗಳೂರು : ನಗರಕ್ಕೆ ಮಾದಕ ವಸ್ತುವಾದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆತನ ವಶದಲ್ಲಿದ್ದ ಸುಮಾರು 81,000 ರೂ.ಮೌಲ್ಯದ ಗಾಂಜಾವನ್ನು ವಶಪಡಿಸಿಂಡಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಅಬ್ದುಲ್ ನಾಸೀರ್ (19) ಎಂದು ಹೆಸರಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಬಳಿಯ ಸಹಕಾರಿ ಬ್ಯಾಂಕ್ ವೊಂದರ ಮುಂಭಾಗ ಕಾಸರಗೋಡು ಜಿಲ್ಲೆಯ ನೊಂದಾಣೆ ಸಂಖ್ಯೆಯ ಬಿಳಿ ಬಣ್ಣದ ಹೊಂಡಾ ಅಕ್ಟಿವಾ ವಾಹನದಲ್ಲಿ ಮಂಗಳೂರು ನಗರಕ್ಕೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿ ಅಬ್ದುಲ್ ನಾಸೀರ್ ನನ್ನು ವಶಕ್ಕೆ ಪಡೆದು ಕೊಂಡಿರುವ ಸಿಸಿಬಿ ಪೊಲೀಸರು ಆರೋಪಿ ಬಳಿಯಿದ್ದ ಸುಮಾರು 30,000/- ಮೌಲ್ಯದ ಸುಮಾರು 1.100 ಕೆಜಿ ಗಾಂಜಾ. ಮೊಬೈಲ್ ಫೋನ್ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಉಪಯೋಗಿಸುತ್ತಿದ್ದ ಹೊಂಡಾ ಅಕ್ಟಿವಾ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 81,000/- ಆಗಬಹುದು ಅಂದಾಜಿಸಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ಅಬ್ದುಲ್ ನಾಸೀರ್ ಎಂಬಾತನ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ವಾಹನ ಕಳವು, ಕನ್ನ ಕಳವು ಹಾಗೂ ದರೋಡೆಗೆ ಯತ್ನಿಸಿದ ಪ್ರಕರಣ ಹಾಗೂ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣವು ದಾಖಲಾಗಿರುತ್ತದೆ.
ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿ’ಸೋಜ ಮತ್ತು ಸಬ್ ಇನ್ಸಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.
Comments are closed.