ಕುಂದಾಪುರ: ಭಾರತೀಯ ಜನತಾ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ಅಸಾಮಾನ್ಯ ವ್ಯಕ್ತಿಯಾಗಿ ಬೆಳೆಯಲು ಸಾಧ್ಯವಿದೆ. ಇವತ್ತು ಕಾರ್ಯಕರ್ತರ ಶ್ರಮದ ಫಲವಾಗಿ ಬಿಜೆಪಿ ಬಲಿಷ್ಠವಾಗಿ ಬೆಳೆದು ನಿಂತಿದೆ. ಇನ್ನೂ ಕೂಡಾ ಪಕ್ಷ ಬಲಿಷ್ಠವಾಗಬೇಕಿದೆ. ನೂತನ ಪದಾಧಿಕಾರಿಗಳ ಮುಂದಿನ ಮೂರು ವರ್ಷದ ಅವಧಿ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾಗಿದೆ. ರಾಜ್ಯದಲ್ಲಿ ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷ ಬಲಪಡಿಸುವ ಕೆಲಸ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲ ಕುಂದರ್ ಹೇಳಿದರು.
ಕುಂದಾಪುರದ ಬಿಜೆಪಿ ಕಛೇರಿಯಲ್ಲಿ ನಡೆದ ಕುಂದಾಪುರ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಸಲಹೆ, ಸೂಚನೆ, ಸಹಕಾರ ಮುಂದೆಯೂ ನಮ್ಮೊಂದಿಗೆ ಇರುತ್ತದೆ. ಪಕ್ಷದ ಬೂತ್‌ಮಟ್ಟದ ಕಾರ್ಯಕರ್ತರ ಭೇಟಿಯಾಗಿ, ಪಕ್ಷಬಲವರ್ಧನೆಗೆ ಪ್ರೇರೆಪಿಸುವ ಕೆಲಸ ಮಾಡುತ್ತೇನೆ. ಕ್ಷೇತ್ರದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯ ಪಕ್ಷದ ರಾಜ್ಯ, ಜಿಲ್ಲಾ ನಾಯಕರ ಮಾರ್ಗದರ್ಶನದಲ್ಲಿ ಮಾಡುತ್ತೇನೆ ಎಂದರು.
ನಿಕಟಪೂರ್ವಾಧ್ಯಕ್ಷ ರಾಜೇಶ ಕಾವೇರಿ ಮಾತನಾಡಿ, ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿದ ತೃಪ್ತಿ ನನಗಿದೆ. ಎಲ್ಲಾ ಮೋರ್ಛಾಗಳ ರಚಿಸಿಕೊಂಡು, ಎಲ್ಲರ ಸಹಕಾರದಿಂದ ಪಕ್ಷವನ್ನು ಮುನ್ನೆಡಿಸಿದ್ದೇನೆ. ಕೆಲವೊಮ್ಮೆ ನೋವಾದರೂ ಪಕ್ಷದ ತತ್ವ ಸಿದ್ದಾಂತಕ್ಕೆ ಧಕ್ಕೆ ಬರದಂತೆ ಕೆಲಸ ಮಾಡಿದ್ದೇನೆ. ಮುಂದೆಯೂ ಕೂಡಾ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುರೇಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಅಂಕದಕಟ್ಟೆ, ಭಾಸ್ಕರ ಬಿಲ್ಲವರಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರ್ಮೆ ಸುರೇಶ ಶೆಟ್ಟಿ, ರಾಜ್ಯ ಕಾರ್ಯಕಾರಿಣಿಯ ಕಿರಣ್ ಕೊಡ್ಗಿ, ಜಿಲ್ಲಾ ಕಾರ್ಯದರ್ಶಿ ಗಣಪತಿ ಟಿ.ಶ್ರೀಯಾನ್, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಮೆಂಡನ್, ಎಸ್.ಸಿ ಮೋರ್ಛಾದ ಅಧ್ಯಕ್ಷ ಗೋಪಾಲ ಕಳಂಜೆ ಉಪಸ್ಥಿತರಿದ್ದರು.
ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಪ್ರಕೋಷ್ಠದ ಸಂಚಾಲಕ ಬಿ.ಕಿಶೋರ್ ಕುಮಾರ್, ತಾ.ಪಂ.ಅಧ್ಯಕ್ಷೆ ಜಯಶ್ರೀ ಮೊಗವೀರ, ಪಕ್ಷದ ಮುಖಂಡರಾದ ಶಾಂತಾರಾಮ ಶೆಟ್ಟಿ ಬಾರ್ಕೂರು, ಮೋಹನದಾಸ ಶೆಣೈ, ಸತೀಶ ಶೆಟ್ಟಿ, ಜಿ.ಪಂ.ಸದಸ್ಯರು, ತಾಪಂ ಸದಸ್ಯರು, ಪುರಸಭೆ ಸದಸ್ಯರು ನೂತನ ಪದಾಧಿಕಾರಿಗಳು ಅಭಿನಂದಿಸಿದರು.
Comments are closed.