*ಯೋಗೀಶ್ ಕುಂಭಾಸಿ
ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್‌ಪಿಯಾಗಿ ಪ್ರವೀಣ ಎಚ್.ನಾಯಕ್ ಜು.೧೨ರಂದು ಸಂಜೆ ಅಧಿಕಾರ ಸ್ವೀಕರಿಸಿದರು. ಕುಂದಾಪುರದಲ್ಲಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸಿ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿರುವ ಮಂಜುನಾಥ ಶೆಟ್ಟಿ ಅವರು ಅಧಿಕಾರ ಹಸ್ತಾಂತರಿಸಿದರು.

ನೂತನ ಡಿವೈಎಸ್‌ಪಿ ಯಾಗಿ ಅಧಿಕಾರ ಸ್ವೀಕರಿಸಿರುವ ಪ್ರವೀಣ್ ಎಚ್ ನಾಯಕ್ ಅವರ ಹುಟ್ಟೂರು ಕೊಪ್ಪ. ಅವರು ಕೋಲಾರ ಜಿಲ್ಲೆಯ ಮುಳಬಾಗಿಲುವಿನಲ್ಲಿ ವೃತ್ತಿ ಜೀವನ ಆರಂಭಿಸಿ ಬೆಂಗಳೂರು ಜಿಲ್ಲೆಯ ರಾಮನಗರ, ಮಂಗಳೂರು ಟೌನ್, ಮಂಗಳೂರು ಸಂಚಾರ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು, ಸುಳ್ಯ, ಉಡುಪಿ ಟೌನ್, ಉಡುಪಿ ವೃತ್ತ, ಕಾಪು, ಮಣಿಪಾಲಗಳಲ್ಲಿ ಎಸ್.ಐ ಆಗಿ ಸೇವೆ ಸಲ್ಲಿಸಿದ್ದಾರೆ. ಇಂಟೆಲಿಜೆನ್ಸ್, ಸ್ಪೇಶಲ್ ಬ್ರಾಂಚ್‌ಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಇವರದ್ದು.
ಇವರು ಬಿಕಾಂ, ಎಲ್.ಎಲ್,ಬಿ, ಎಂಎ ಶಿಕ್ಷಣ ಪಡೆದಿದ್ದಾರೆ. ಡಿವೈಎಸ್ಪಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದರು. ಕಳ್ಳತನ, ಅಪರಾಧ ಕೃತ್ಯಗಳನ್ನು ತಡೆಯುವುಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ವಿವಿಧ ಠಾಣೆಯ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.
Comments are closed.