ಮಂಗಳೂರು, ಜೂ.15 : ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಿ. ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಮಂಪರು ಪರೀಕ್ಷೆಗೆ ನ್ಯಾಯಾಲಯ ಅನುಮತಿ ನಿರಾಕರಿಸಿದೆ. ಆರೋಪಿ ನರೇಶ್ ಶೆಣೈ ಪರೀಕ್ಷೆಗೆ ಸಮ್ಮತಿ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಅನುಮತಿ ನೀಡಿಲ್ಲ.
ಕಾನೂನು ಪ್ರಕಾರ ಆರೋಪಿ ಮಂಪರು ಪರೀಕ್ಷೆಗೆ ಸಮ್ಮತಿ ಸೂಚಿಸಿದರೆ ಮಾತ್ರ ನ್ಯಾಯಾಲಯ ಅನುಮತಿ ನೀಡುತ್ತದೆ.ನೇರವಾಗಿ ನ್ಯಾಯಾಲಯ ಅನುಮತಿ ನೀಡಲು ಅವಕಾಶ ಇರುವುದಿಲ್ಲ. ಈ ಕಾನೂನು ಜಾರಿಯಾದ ಬಳಿಕ ಮಂಪರು ಪರೀಕ್ಷೆಯ ಪ್ರಮಾಣ ಇಳಿಮುಖಗೊಂಡಿದೆ.
ನರೇಶ್ ಶೆಣೈಗೆ ಸುಳ್ಳು ಸುಳ್ಳು ಪತ್ತೆ ಪರೀಕ್ಷೆ, ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್‌ಗೆ ಅವಕಾಶ ನೀಡುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದರ ಜೊತೆಗೆ ನರೇಶ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಆದರೆ ಎರಡಕ್ಕೂ ನ್ಯಾಯಾಲಯ ಅನುಮತಿ ನೀಡಿಲ್ಲ.
ಜೋಡಿ ಕೊಲೆ ಪ್ರಕರಣದಲ್ಲಿ ಸಮ್ಮತಿ :
ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಮಂಪರು ಪರೀಕ್ಷೆಗೆ ಸಮ್ಮತಿ ಸೂಚಿಸಿದ್ದರು. ಕೊಲೆಯಾದ ಮಹಿಳೆಯ ಪತಿ ಹಾಗೂ ತಮ್ಮ ಮಂಪರು ಪರೀಕ್ಷೆ ನಡೆಸುವಂತೆ ಸಮ್ಮತಿ ಸೂಚಿಸಿದ್ದರು.ಆದರೆ ಇದುವರೆಗೆ ಮಂಪರುಪರೀಕ್ಷೆ ಆಗಿಲ್ಲ ಎಂದು ಮೂಲಗಳು ವಿವರಿಸಿವೆ.
Comments are closed.