ಮಂಗಳೂರು : ಇಬ್ಬರು ಯುವಕರ ಮೇಲೆ ದುಷ್ಖರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮೂಡುಬಿದಿರೆ ಸಮೀಪದ ಮಿಜಾರು ಚೆಕ್ ಪೋಸ್ಟ್ ಬಳಿ ಶನಿವಾರ ತಡ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ಯುವಕರನ್ನು ಧರ್ಮೇಂದ್ರ ಕುಮಾರ್ ಹಾಗೂ ಧರ್ಮೇಂದ್ರ ತೋಡಾರ್ ಎಂದು ಹೆಸರಿಸಲಾಗಿದೆ.
ಶನಿವಾರ ರಾತ್ರಿ ಸುಮಾರು 11 ಗಂಟೆ ವೇಳೆ ಧರ್ಮೇಂದ್ರ ಕುಮಾರ್ ಹಾಗೂ ಧರ್ಮೇಂದ್ರ ತೋಡಾರ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ತಂಡ ಪರಾರಿಯಾಗಿದೆ.. ಹಲ್ಲೆಯಿಂದ ಗಂಭೀರ ಗಾಯಗೊಂಡ ಈ ಇಬ್ಬರು ಯುವಕರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೆಲವು ಮುಸ್ಲಿಂ ಯುವರಿಂದ ಹಲ್ಲೆ ನಡೆದಿದೆ ಎಂಬ ವದಂತಿ ಹಬ್ಬಿದೆ. ಆದರೆ ಈ ಬಗ್ಗೆ ಸ್ಪಷ್ಟ ಪುರವೆ ಸಿಕ್ಕಿಲ್ಲ.
ಯಾವ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಯಾರಿಂದ ಹಲ್ಲೆ ನಡೆದಿದೆ ಎಂಬ ಮಾಹಿತಿ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.