ಕರಾವಳಿ

ರಸ್ತೆ ಅಪಘಾತ ತಡೆಗಾಗಿ ಉಡುಪಿ ಜಿಲ್ಲಾ ಪೊಲೀಸರಿಂದ ‘ಆಪರೇಷನ್ ಸುರಕ್ಷಾ’

Pinterest LinkedIn Tumblr

ಉಡುಪಿ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಜುಲೈ 18 ರಿಂದ ಅಗಸ್ಟ್ 17 ರವರೆಗೆ “ಆಪರೇಷನ್ ಸುರಕ್ಷಾ” ಎಂಬ ವಿಶೇಷ ಕಾರ್ಯಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ಅಣ್ಣಾಮಲೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sp. K, annamalai

(ಎಸ್ಪಿ ಕೆ. ಅಣ್ಣಾಮಲೈ)

ಈ ಸಮಯ ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆಯ ವೇಳೆಗೆ ವಾಹನ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕ/ಸವಾರರುಗಳ ವಿರುದ್ದ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುವುದು. ಈ ಅವಧಿಯಲ್ಲಿ ಸಣ್ಣಪುಟ್ಟ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳನ್ನು ಕಠಿಣವಾಗಿ ಪರಿಗಣಿಸಲಾಗುವುದು.

ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಹಾಗೂ ಕಾರ್ಕಳ-ಪಡುಬಿದ್ರಿ ರಾಜ್ಯ ರಸ್ತೆಯಲ್ಲಿ ಈ ಬಗ್ಗೆ ಹೆಚ್ಚು ಗಮನಹರಿಸಲಾಗುವುದು. ಮುಖ್ಯವಾಗಿ ಅತೀವೇಗದ ವಾಹನ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ ಹಾಗೂ ವಿರುದ್ದ ದಿಕ್ಕಿನಲ್ಲಿ ವಾಹನ ಚಾಲನೆ (ಓನ್ ವೇ) ಹಾಗೂ ಮೊಬೈಲ್ ಬಳಸುತ್ತಾ ವಾಹನ ಚಾಲನೆ ಮಾಡುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೇ ಶಾಲಾ ಮಕ್ಕಳನ್ನು ಸಾಗಾಟ ಮಾಡುವ ವಾಹನಗಳನ್ನು ತಪಾಸಣೆ ನಡೆಸಿ ನಿಯಮ ಉಲ್ಲಂಘಿಸದಂತೆ ಕ್ರಮಕೈಗೊಳ್ಳಲಾಗುವುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

Comments are closed.