ಕರಾವಳಿ

ಬಾಳಿಗಾ ಹತ್ಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶೈಲೇಶ್‌ಗೆ ಜಾಮೀನು ಮಂಜೂರು

Pinterest LinkedIn Tumblr

Baliga_Protest_Meravang_6

ಮಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಯಾನೆ ಶೈಲು ಎಂಬವರಿಗೆ ಮಂಗಳವಾರ ಮಂಗಳೂರು ನ್ಯಾಯಾಲಯ ಜಾಮೀನು ನೀಡಿದೆ. ಬಾಳಿಗಾ ಕೊಲೆಗೆ ಸಂಬಂಧಿಸಿ 6 ಮಂದಿ ಆರೋಪಿಗಳ ಜೊತೆಗೆ ಶೈಲೇಶ್‌ನನ್ನು ಮೇ 18ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಅಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು.

ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿನಿತ್ ಪೂಜಾರಿ, ನಿಶಿತ್ ದೇವಾಡಿಗ, ಶಿವ @ ಶಿವಪ್ರಸಾದ್, ಶೈಲೇಶ್ , ಶ್ರೀಕಾಂತ್‌, ಮಂಜು ನಿರೇಶ್ವಾಲ್ಯ ಹಾಗೂ ನರೇಶ್ ಶೆಣೈಯನ್ನು ಬಂಧಿಸಲಾಗಿತ್ತು. ಆರು ಮಂದಿ ಆರೋಪಿಗಳಲ್ಲಿ ಮಂಜು ನಿರೇಶ್ವಾಲ್ಯ ಎಂಬವರಿಗೆ ಈಗಾಗಲೇ ಕೋರ್ಟ್ ಜಾಮೀನು ನೀಡಿದೆ. ಇದೀಗ ಶೈಲೇಶ್‌ಗೆ ನ್ಯಾಯಾಲಯ ಜಾಮೀನು ಲಭಿಸಿದೆ.

Comments are closed.