ಮಂಗಳೂರು, ಜು.23: ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಎ. ಬಿ ಇಬ್ರಾಹೀಂ ಅವರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದ ಘಟನೆ ಇಂದು ಉದನೆ -ಗುಂಡ್ಯ ರಾ.ಹೆದ್ದಾರಿ ಬಳಿ ಸಂಭವಿಸಿದೆ.
ಅಪಘಾತ ನಡೆದ ಸಂದರ್ಭ ಕಾರಿನಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಗುಂಡ್ಯಕ್ಕೆ ಪತ್ನಿ ಸಮೇತ ತೆರಳುತ್ತಿದ್ದ ಜಿಲ್ಲಾಧಿಕಾರಿಗಳ ಕಾರಿಗೆ ಉದನೆ ಬಳಿ ಸಮೀಸುತ್ತಿದ್ದಂತೆ ಸ್ಕಾರ್ಪಿಯೋ ಕಾರೊಂದು ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಜಿಲ್ಲಾಧಿಕಾರಿ ಮತ್ತು ಅವರ ಪತ್ನಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದಲ್ಲಿ ಜಿಲ್ಲಾಧಿಕಾರಿಯವರ ಕಾರಿಗೆ ಹಾನಿಯಾಗಿದೆ. ಡಿಕ್ಕಿಹೊಡೆದ ರಭಸಕ್ಕೆ ಸ್ಕಾರ್ಪಿಯೋ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ಯುನಿಟಿ ಆಸ್ಪತ್ರೆಗೆ ದಾಖಲುಪಡಿಸಲಾಗಿದೆ.
ಅಪಘಾತ ನಡೆದ ಸ್ಥಳದಲ್ಲಿ ಕೆಲಹೊತ್ತುಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.
ಗಾಯಾಳುಗಳೊಂದಿಗೆ ಯುನಿಟಿ ಆಸ್ಪತ್ರೆಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಗುಂಡ್ಯದಲ್ಲಿ ಸಣ್ಣ ಅಪಘಾತವಾಗಿದೆ. ನಾನು ಪ್ರತಿದಿನ ಕಾರಿನಲ್ಲಿದ್ದಾಗ ಸೀಟು ಬೆಲ್ಟ್ ಧರಿಸಿ ಪ್ರಯಾಣಿಸುತ್ತಿರುವುದರಿಂದ ಯಾವುದೆ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
Comments are closed.