ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಪುತ್ರ ರಾಕೇಶ್ ಅವರು ಬೆಲ್ಜಿಯಂನಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಬೆಲ್ಜಿಯಂನಲ್ಲಿರುವ ಸಿಎಂ ಪುತ್ರ ರಾಕೇಶ್ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಚಿಕಿತ್ಸೆಗೆ ಇಬ್ಬರ ವೈದ್ಯರ ತಂಡವನ್ನು ವಿದೇಶಕ್ಕೆ ಕಳುಹಿಸಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಕೇಶ್ ಅವರು ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದಾಗ ತೀವ್ರ ಅನಾರೋಗ್ಯಕ್ಕೆ (ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ ) ತುತ್ತಾಗಿದ್ದಾರೆ. ಅವರಿಗೆ ಅಲ್ಲಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ. ಈಗಾಗಲೇ ಸಿಎಂ ಪತ್ನಿ ಪಾರ್ವತಮ್ಮ ಅವರು ಇಬ್ಬರು ವೈದ್ಯರ ಜತೆ ಬೆಲ್ಜಿಯಂ ತಲುಪಿದ್ದಾರೆ. ಪುತ್ರನ ಅನಾರೋಗ್ಯದ ಬಗ್ಗೆ ಸಿದ್ದರಾಮಯ್ಯ ಕೂಡ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿ ಸಹಾಯ ಯಾಚಿಸಿದ್ದಾರೆ ಎನ್ನಲಾಗಿದೆ. ಬೆಲ್ಜಿಯಂನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಕೂಡ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments are closed.