ಉಡುಪಿ: ಮಹದಾಯಿ ನದಿಯಿಂದ ಮಲಪ್ರಭಾಕ್ಕೆ ನೀರು ಹರಿಸುವಂತೆ ಕೋರಿ ಕರ್ನಾಟಕ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ಮಹದಾಯಿ ನ್ಯಾಯಮಂಡಳಿಯ ತೀರ್ಪನ್ನು ಖಂಡಿಸಿ ಉಡುಪಿಯಲ್ಲಿ ಜಯಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಉಡುಪಿಯ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಿದ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಕೇಂದ್ರ- ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಸರಕಾರ ಸರಿಯಾಗಿ ವಾದ ಮಂಡಿಸಲಿಲ್ಲ ಹಾಗೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದಲ್ಲದೇ ಮುಂದಿನ ದಿನದಲ್ಲಿ ನೀರಿನ ವಿಚಾರದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಜಯಕರ್ನಾಟಕದ ಜಿಲ್ಲಾದ್ಯಕ್ಷ ಜನನಿ ದಿವಾಕರ್ ಶೆಟ್ಟಿ ಎಚ್ಚರಿಸಿದರು.
Comments are closed.