ಉಡುಪಿ: ಉಡುಪಿ ಜಿಲ್ಲೆಯ ಹದಿನೆಂಟನೆ ಜಿಲ್ಲಾಧಿಕಾರಿಯಾಗಿ ಟಿ ವೆಂಕಟೇಶ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿ (ಪ್ರಭಾರ) ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಂದ ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಸಕ್ತ ಜಿಲ್ಲೆ ಎದುರಿಸುತ್ತಿರುವ ಮರಳುಗಾರಿಕೆ, ಡೀಮ್ಡ್ ಫಾರೆಸ್ಟ್, ವಸತಿ ಯೋಜನೆಗಳು, ಕುಡಿಯುವ ನೀರು, ಮುಜರಾಯಿ ಇಲಾಖೆ, ವಿವಿಧ ಇಲಾಖೆಗಳ ಸಿಬ್ಬಂದಿ ಕೊರತೆ ಬಗ್ಗೆ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ರವರು ನೂತನ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಬ್ರಹ್ಮಾವರ ತಹಶೀಲ್ದಾರ್ ತಿಪ್ಪೇಸ್ವಾಮಿ, ಬೈಂದೂರು ತಹಶೀಲ್ದಾರ್ ಕಿರಣ್, ಉಡುಪಿ ತಹಶೀಲ್ದಾರ್ ಗುರುಪ್ರಸಾದ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಯೋಗೇಶ್ವರ್, ಯೋಜನಾ ನಿರ್ದೇಶಕ ಪ್ರಸನ್ನ, ನಿರ್ಮಿತಿ ಕೇಂದ್ರದ ಅರುಣ್, ನಗರಾಭಿವೃದ್ಧಿ ಇಲಾಖೆಯ ಆಯುಕ್ತರಾದ ಜನಾರ್ದನ್, ಸಹಾಯಕ ನಿರ್ದೇಶಕ ನಾಗರಾಜ್ ರಾವ್ ಉಪಸ್ಥಿತರಿದ್ದರು.
Comments are closed.