ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ (39) ಸಿದ್ದರಾಮಯ್ಯ ಶನಿವಾರ ಬೆಲ್ಜಿಯಂನ ಬ್ರುಸೆಲ್ಸ್ ಸಿಟಿಯ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದಾಗಿ ತಿಳಿದುಬಂದಿದೆ.
ಬೆಲ್ಜಿಯಂ ಪ್ರವಾಸದಲ್ಲಿದ್ದ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಬ್ರಸೆಲ್ಸ್ ನ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಕಳೆದ ವಾರ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಜೀವನ್ಮರಣದ ಹೋರಾಟ ನಡೆಸುತ್ತಿದ್ದ ರಾಕೇಶ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಪುತ್ರನ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, 2ನೇ ಪುತ್ರ ಡಾ.ಯತೀಶ್ ಕೂಡಾ ಬೆಲ್ಜಿಯಂಗೆ ತೆರಳಿದ್ದರು.
ವಿಶೇಷ ವಿಮಾನದ ಮೂಲಕ ನಾಳೆ ಸಂಜೆ ರಾಕೇಶ್ ಅವರ ಪಾರ್ಥಿವ ಶರೀರ ಬೆಂಗಳೂರು ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.
Comments are closed.