ಭೀವಂಡಿ(ಮುಂಬೈ): ಮಹಾನಗರಿ ಮುಂಬೈ ಸಮೀಪದ ಭಿವಂಡಿಯಲ್ಲಿ ಮೂರಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭಿವಂಡಿಯ ಗರೀಬಿ ನಗರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಬೀರ್ ಕಟ್ಟಡ ಇಂದು ಬೆಳಗ್ಗೆ ಹಠಾತನೆ ಕುಸಿದು ಬಿದ್ದಿದೆ. ಶಿಥಿಲಗೊಂಡಿದ್ದ ಹಳೆಯ ಕಟ್ಟಡ ಭಾನುವಾರ ಬೆಳಗ್ಗೆ 9.15ರ ಸುಮಾರಿಗೆ ಕುಸಿದು ಬಿದ್ದು ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಇದೇ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿ 25 ಮಂದಿಯನ್ನು ರಕ್ಷಿಸಿದ್ದಾರೆ.
ಕುಸಿದಿರುವ ಕಟ್ಟಡ ಅಪಾಯಕಾರಿ ಪಟ್ಟಿಯಲ್ಲಿದ್ದು, ಈ ಕಟ್ಟಡ ತೆರವಿಗೆ ಮುನಿಸಿಪಲ್ ಕಾರ್ಪೊರೇಷನ್ ನೋಟಿಸು ಜಾರಿ ಮಾಡಿತ್ತು ಎಂದು ಭಿವಂಡಿ ಮುನಿಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.


Comments are closed.