ಕರಾವಳಿ

ರಾಕೇಶ್ ಸಿದ್ದರಾಮಯ್ಯ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

Pinterest LinkedIn Tumblr

Rakesh-Body-Balore

ಬೆಂಗಳೂರು: ಬೆಲ್ಜಿಯಂನಲ್ಲಿ ಮೃತರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ವಿವಿಧ ಗಣ್ಯರು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರು ರಾಕೇಶ್ ಪಾರ್ಥೀವ ಶರೀರದೊಂದಿಗೆ ಆಗಮಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಾಲಯ್ಯ, ಚಾಮರಾಜಪೇಟೆ ಜೆಡಿಎಸ್ ಶಾಸಕ ಬಿ ಝಡ್ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ ಉಪಸ್ಥಿತರಿದ್ದರು.

ಬೆಳಗ್ಗೆ 9.15ಕ್ಕೆ ಪಾರ್ಥೀವ ಶರೀರ ಬೆಲ್ಜಿಯಂ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, 9.30ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ರವಾನೆ ಮಾಡಲಾಗುತ್ತದೆ. ಬೆಳಗ್ಗೆ 10.30ಕ್ಕೆ ಮೈಸೂರಿಗೆ ಆಗಮಿಸುವ ಪಾರ್ಥೀವ ಶರೀರವನ್ನು ನೇರವಾಗಿ ಮೈಸೂರಿನ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣಕ್ಕೆ ತೆಗೆದುಕೊಂಡು ಬರಲಾಗುತ್ತದೆ.

ಬಳಿಕ ಅಲ್ಲಿ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಟಿ.ಕಾಟೂರಿನಲ್ಲಿರುವ ಫಾರಂ ಹೌಸ್ ನಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ.

Comments are closed.