ಕರ್ನಾಟಕ ರಾಜ್ಯ ದೇವಾಡಿಗ ಸಂಘ ಹಾಗು ದುಬೈ ದೇವಾಡಿಗ ಸಂಘದ ಆಶ್ರಯದಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಮಣ್ಣಗುಡ್ಡೆಯ ಸಮಾಜ ಭವನದಲ್ಲಿ ವಿದ್ಯಾರ್ಥಿ ವೇತನ ಹಾಗು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಅಧ್ಯಕ್ಷ ವಾಮನ್ ಮರೋಳಿ ವಹಿಸಲಿದ್ದಾರೆ. ಮಂಗಳೂರು ಶ್ರೀದೇವಿ ಎಜ್ಯುಕೇಶನ್’ನ ಅಧ್ಯಕ್ಷ ಎ.ಸದಾನಂದ ಶೆಟ್ಟಿ, ಕತಾರ್ ತುಳುಕೂಟದ ಅಧ್ಯಕ್ಷ ರವಿ ಶೆಟ್ಟಿ, ದುಬೈ ದೇವಾಡಿಗ ಸಂಘದ ನಿಕಟಪೂರ್ವ ಅಧ್ಯಕ್ಷ, ದುಬೈ ACME ಬಿಲ್ಡಿಂಗ್ ಮೆಟೀರಿಯಲ್ಸ್’ನ ಆಡಳಿತ ನಿರ್ದೇಶಕ ಹರೀಶ್ ಶೇರಿಗಾರ್, ದುಬೈ ದೇವಾಡಿಗ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಮುಂಬೈ ದೇವಾಡಿಗ ಸಂಘದ ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಂಗಳೂರಿನ ನ್ಯೂರೋ ಸರ್ಜನ್ ಡಾ.ಕೆ.ವಿ.ದೇವಾಡಿಗ, ಶಿವಮೊಗ್ಗ ಕುವೆಂಪು ವಿ.ವಿ.ವಿಶ್ರಾಂತ ಕುಲಪತಿ ಡಾ.ಬಿ.ಯಸ್.ಶೇರಿಗಾರ್, ಯಸ್.ಡಿ.ಎಂ.ಬಿಸ್ನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ಡಾ.ದೇವರಾಜ್ ಕೆ. ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ಇರಲಿದ್ದಾರೆ.
ದೇವಾಡಿಗ ಸಮುದಾಯದ ಬಡ – ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಣದಿಂದ ವಂಚಿತರಾಗ ಬಾರದೆಂಬ ಉದ್ದೇಶದಿಂದ ಕಳೆದ ಕೆಲವು ವರ್ಷಗಳಿಂದ ರಾಜ್ಯ ದೇವಾಡಿಗ ಸಂಘ ಹಾಗು ದುಬೈ ದೇವಾಡಿಗ ಸಂಘದ ಆಶ್ರಯದಲ್ಲಿ 50 ಲಕ್ಷ ರೂ. ಹೆಚ್ಚು ಹಣವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡಲಾಗಿದೆ. ಜೊತೆಗೆ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯದ ಬಡವರಿಗೆ ಆರ್ಥಿಕ ನೆರವನ್ನು ಕೂಡ ನೀಡಲಾಗುತ್ತಿದೆ.
ಕಳೆದ 4 ವರ್ಷಗಳಿಂದ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ (ಟಾಪರ್) ಗಳಿಸುವ ಮೂಲಕ ವಿಶಿಷ್ಠ ಸಾಧನೆಗೈದ ವಿದ್ಯಾರ್ಥಿಗೆ ಹರೀಶ್ ಶೇರಿಗಾರ್ ಅವರು ತಮ್ಮ ವಯಕ್ತಿಕ ನೆಲೆಯಲ್ಲಿ ಲ್ಯಾಪ್‌ಟಾಪ್ ನೀಡಿ ಗೌರವಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ (ಟಾಪರ್) ಗಳಿಸುವ ಮೂಲಕ ವಿಶಿಷ್ಠ ಸಾಧನೆಗೈದ ವಿದ್ಯಾರ್ಥಿಗೆ ಲ್ಯಾಪ್‌ಟಾಪ್ ನೀಡಿ ಅಭಿನಂದಿಸಲಿದ್ದಾರೆ.
ಪ್ರತೀ ವರ್ಷ ಸಂಘದ ವತಿಯಿಂದ ನಡೆಯುವ ವಿದ್ಯಾರ್ಥಿ ವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬಡ ವಿದ್ಯಾರ್ಥಿಗಳ ಹೆಚ್ಚಿನ ಶಿಕ್ಷಣ ಪೂರೈಸಲು ಸಹಕಾರಿಯಾಗುವಂತೆ ಸಂಘಕ್ಕೆ ತಮ್ಮ ವಯಕ್ತಿಕ ನೆಲೆಯಲ್ಲಿ ಹೆಚ್ಚಿನ ಸಹಾಯಧನವನ್ನು ನೀಡುತ್ತಾ ಬಂದಿರುವ ಹರೀಶ್ ಶೇರಿಗಾರ್ ಅವರು, ಜೊತೆಗೆ ವೈಯಕ್ತಿಕವಾಗಿ ಬಡ – ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಅಶಕ್ತರಿಗೆ ಸಹಾಯ ನೀಡುತ್ತಿರುವ ಹಲವಾರು ಟ್ರಸ್ಟ್ ಗಳಿಗೆ ಸಾಮಾಜಿಕ ಕಳಕಳಿಯಿಂದ ಸಹಾಯಹಸ್ತವನ್ನು ನೀಡುತ್ತಾ ಬಂದಿರುದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ಬಾರಿ ನೀಡಲಾದ ವಿದ್ಯಾರ್ಥಿ ವೇತನ ಹಾಗು ಪ್ರತಿಭಾ ಪುರಸ್ಕಾರ ಸಮಾರಂಭ ಫೋಟೋಗಳು(ಕೆಳೆಗೆ ಇವೆ) …..
Comments are closed.