ಕರಾವಳಿ

ಅಗಸ್ಟ್ 24 : ಶ್ರೀಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಹಬ್ಬ “ಶ್ರೀಕೃಷ್ಣ ವೇಷ ಸ್ಪರ್ಧೆ”

Pinterest LinkedIn Tumblr

Kalkura_Krishna_kadri_2

(ಕಡತ ಚಿತ್ರಗಳು)

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ ಅಗಸ್ಟ್ 24ನೇ ಬುಧವಾರ ವರ್ಷಂಪ್ರತಿಯಂತೆ ಶ್ರೀಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮ್ಕಕಳ ಹಬ್ಬ ಶ್ರೀಕೃಷ್ಣ ವೇಷ ಸ್ಪರ್ಧೆಯು ಜರಗಲಿದೆ.

ಬೆಳಿಗ್ಗೆ 9ರಿಂದ ಆರಂಭಗೊಂಡು ರಾತ್ರಿ 9ರವರೆಗೆ ನಡೆಯಲಿರುವ ಈ ಬೃಹತ್ ಸ್ಪರ್ಧಾಕಾರ್ಯಕ್ರಮದಲ್ಲಿ ಈ ಬಾರಿ ಒಟ್ಟು 28 ವಿಭಾಗಗಳಿದ್ದು ಎಲ್ಲವೂ ಏಕಕಾಲದಲ್ಲಿ ನಡೆಯಲಿವೆ. ಒಂದು ವರ್ಷದೊಳಗಿನ ಕಂದಮ್ಮಗಳಿಂದ ತೊಡಗಿ 7ನೇ ತರಗತಿವರೆಗಿನ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.

Krishna_Vesha_kadri_71 Krishna_Vesha_kadri_51 Krishna_Vesha_kadri_35 Kadri_kalkura_krishna_44 Kalkur_Kadri_krishna_18 Krishna_Vesha_kadri_59

ಪಾರಂಪರಿಕ/ ಆಧುನಿಕ ಗೀತೆಗಳ ಪ್ರಸ್ತುತಿ ‘ಗಾನವೈಭವ’ ಸ್ಪರ್ಧೆಯು ಮಕ್ಕಳಿಗಾಗಿ ಈ ಬಾರಿ 4 ವಿಭಾಗಗಳಲ್ಲಿ ಏರ್ಪಡಿಸಲಾಗಿದೆ. ಕಂದಕೃಷ್ಣ, ಮುದ್ದುಕೃಷ್ಣ, ತುಂಟಕೃಷ್ಣ, ಬಾಲಕೃಷ್ಣ, ಕಿಶೋರಕೃಷ್ಣ, ಶ್ರೀಕೃಷ್ಣ, ಗೀತಾಕೃಷ್ಣ, ರಾಧಾಕೃಷ್ಣ, ದೇವಕಿಕೃಷ್ಣ, ಯಶೋದಕೃಷ್ಣ, ವಸುದೇವಕೃಷ್ಣ, ಯಕ್ಷಕೃಷ್ಣ, ಶಂಖನಾದ, ಶಂಖ ಉದ್ಘೋಷ, ನಂದಗೋಕುಲ, ಬಾಲಕೃಷ್ಣ ರಸಪ್ರಶ್ನೆ, ಶ್ರೀಕೃಷ್ಣ ರಸಪ್ರಶ್ನೆ, ಛಾಯಾಕೃಷ್ಣ, ವರ್ಣವೈಭವ, ಮೊದಲಾದ ವೈವಿಧ್ಯಮಯ ಸ್ಪರ್ಧೆಗಳು ವಿವಿಧ ವಿಭಾಗಗಳಲ್ಲಿ ನಡೆಯಲಿರುವುದು.

ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೂ ಕಡೆಗೋಲು ಕೃಷ್ಣನ ಪಂಚಲೋಹದ ವಿಗ್ರಹ, ಪ್ರಶಂಸಾ ಪತ್ರದ ಜೊತೆಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳಿದ್ದು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Comments are closed.