
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿ ಮಸಾಜ್ ಥೆರಫಿ ಹೆಸರಿನಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಮಸಾಜ್ ಸೆಂಟರೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ಅಲ್ಲಿದ್ದ ಐವರು ಮಹಿಳೆಯರನ್ನು ರಕ್ಷಿಸಿ, ಮೂವರು ಯುವಕರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಶ್ರಫ್ (30), ಕೇಶವ (28), ಸುರೇಶ್ (31) ಎಂದು ಗುರುತಿಸಲಾಗಿದೆ. ಬಂಧಿತರಿಂದ 6 ಸಾವಿರ ರೂ. ವಶಪಡಿಸಿಕೊಳ್ಳಲಾಗಿದೆ.
ನಗರದ ಕೆ.ಎಸ್. ರಾವ್ ರಸ್ತೆಯಲ್ಲಿ ಸಂಜೀವಿನಿ ಆರ್ಯುವೇದಿಕ್ ಮಸಾಜ್ ಥೆರಫಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂದರು ಠಾಣಾ ಇನ್ಸ್‌ಪೆಕ್ಟರ್ ಶಾಂತಾರಾಮ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ಸಂದರ್ಭದಲ್ಲಿ ಮಸಾಜ್ ಸೆಂಟರ್ ಮಾಲೀಕ ಧನರಾಜ್ ಕುಂಪಲ ಎಂಬಾತ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.