ಕರಾವಳಿ

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Pinterest LinkedIn Tumblr

Congres_Protest_Dalits_1

ಮಂಗಳೂರು, ಆ.8: ದೇಶದಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೋಮವಾರ ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

Congres_Protest_Dalits_2 Congres_Protest_Dalits_3 Congres_Protest_Dalits_4 Congres_Protest_Dalits_5

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಕಾಂಗ್ರೆಸ್ ಮುಖಂಡೆ ಹಾಗೂ ವಿಧಾನ ಪರಿಷತ್ ಸದಸೈ ಡಾ.ಮೋಟಮ್ಮ ಅವರು ಮಾತನಾಡಿ, ಧರ್ಮ, ಜಾತಿ, ಭಾಷೆಯ ಆಧಾರದಲ್ಲಿ ಭೇಧಭಾವ ಮಾಡದೆ ಎಲ್ಲರಿಗೆ ರಕ್ಷಣೆ ನೀಡವುದನ್ನು ಕೇಂದ್ರ ಸರಕಾರ ಮರೆತಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ಹೇಳಿದರು.

Congres_Protest_Dalits_7 Congres_Protest_Dalits_10

Congres_Protest_Dalits_6 Congres_Protest_Dalits_8 Congres_Protest_Dalits_9

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಪ್ರಧಾನಿ ಮೋದಿ ಹೇಳಿಕೆ ದಲಿತರ ಮೇಲೆ ದೌರ್ಜನ್ಯವೆಸಗುತ್ತಿರುವವರ ಮೇಲೆ ಪರಿಣಾಮ ಬೀರಬೇಕು. ದಲಿತರ ಆಹಾರ ಪದ್ದತಿಯನ್ನು ಹತ್ತಿಕ್ಕುವ ಅಧಿಕಾರ ಸಂಘಪರಿವಾರಕ್ಕಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ನರಭಕ್ಷಕರಾಗಿ, ಗೋಮುಖ ವ್ಯಾಘ್ರರಂತೆ ದಲಿತರ ಚರ್ಮ ಸುಲಿಯುತ್ತಿರುವ ಸಂಘಪರಿವಾರಕ್ಕೆ ದಲಿತರ ಮೇಲೆ ಹಲ್ಲೆ ಮಾಡಲು ಅಧಿಕಾರ ಕೊಟ್ಟವರಾರು ಎಂದು ಪ್ರಶ್ನಿಸಿದರು.

Congres_Protest_Dalits_11 Congres_Protest_Dalits_12 Congres_Protest_Dalits_13 Congres_Protest_Dalits_14 Congres_Protest_Dalits_15 Congres_Protest_Dalits_16 Congres_Protest_Dalits_17 Congres_Protest_Dalits_18 Congres_Protest_Dalits_19

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ, ವಿಧಾನಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ, ಎಐಸಿಸಿ ಸದಸ್ಯ ಪಿ.ವಿ.ಮೋಹನ್, ದ.ಕ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕಾಂಗ್ರೆಸ್ ಮುಖಂಡರುಗಳಾದ ಸುರೇಶ್ ಬಳ್ಳಾಲ್, ಪದ್ಮನಾಭ ನರಿಂಗಾನ, ಶಶಿಧರ್ ಹೆಗ್ಡೆ, ಡಾ.ರಘು, ಲ್ಯಾನ್ಸಿಲಾಟ್ ಪಿಂಟೋ, ಅಪ್ಪಿ, ವಿಶ್ವಾಸ್ದಾಸ್, ಬಾಲಕೃಷ್ಣ ಶೆಟ್ಟಿ, ಟಿ.ಕೆ.ಸುಧೀರ್, ವಿನಯರಾಜ್, ಅಶಿತ್ ಪಿರೇರ,ಸದಾಶಿವ ಅಮೀನ್, ನಝೀರ್ ಬಜಾಲ್,ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.