
ಮಂಗಳೂರು, ಆ.15: ಮಂಗಳೂರಿನ ಪ್ರಭಾವಿ ಯುವಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಪ್ತನೆಂದೇ ಗುರುತಿಸಲ್ಪಟ್ಟ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ತೇಜಸ್ವಿರಾಜ್ ಮೇಲೆ ಇಂದು ಹಲ್ಲೆ ನಡೆದಿದ್ದು, ಹಲ್ಲೆಯಿಂದ ತಲೆಗೆ ಗಂಭೀರ ಗಾಯಗೊಂಡ ತೇಜಸ್ವಿರಾಜ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.
ಯುವ ಕಾಂಗ್ರೆಸ್ ಮುಖಂಡ ತೇಜಸ್ವಿರಾಜ್ ಅವರು ಇಂದು ತಮ್ಮ ಪತ್ನಿಯ ಜೊತೆಗೆ ನಗರದ ಸಿಟಿಸೆಂಟರ್ ಮಾಲ್‌ಗೆ ತೆರಳಿದ್ದ ಸಂದರ್ಭ ಸಿಟಿಸೆಂಟರ್‌ನ ಸೆಕ್ಯುರಿಟಿ ಗಾರ್ಡ್ ಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತೇಜಸ್ವಿರಾಜ್ ಅವರು ತಮ್ಮ ಪತ್ನಿಯೊಂದಿಗೆ ಸಿಟಿಸೆಂಟರ್ ಮಾಲ್‌ಗೆ ತೆರಳಿದ್ದ ಸಂದರ್ಭ ಅಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌ಗೆ ಸಂಬಂಧಿಸಿದಂತೆ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಮತ್ತು ತೇಜಸ್ವಿರಾಜ್ ನಡುವೆ ಮಾತಿನ ಚಕಮಕಿ ನಡೆದಿದ್ದು ಈ ಸಂದರ್ಭ ತೇಜಸ್ವಿರಾಜ್ ಅವರು ಬ್ಯಾರಿಕೇಡ್‌ನ್ನು ತೆರವುಗೊಳಿಸುವಂತೆ ಸೆಕ್ಯುರಿಟಿ ಗಾರ್ಡ್ ಗಳಿಗೆ ಅದೇಶ ನೀಡಿದ್ದರು ಎನ್ನಲಾಗಿದೆ.
ಇದರಿಂದ ಕೆರಳಿದ ಸೆಕ್ಯುರಿಟಿ ಗಾರ್ಡ್ ಗಳು ಹಾಗೂ ತೇಜಸ್ವಿರಾಜ್ ಮಧ್ಯೆ ವಾಗ್ವಾದ ನಡೆದಿದ್ದು, ಈ ಸಂದರ್ಭ ತೇಜಸ್ವಿರಾಜ್ ಅವರನ್ನು ಅವಾಚ್ಯವಾಗಿ ನಿಂದಿಸಿದ ಸೆಕ್ಯುರಿಟಿ ಗಾರ್ಡ್ ಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Comments are closed.