ಉಡುಪಿ: ಉಡುಪಿ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿರುವ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ಉನ್ನತ ತನಿಖೆ ಸಿಐಡಿ ಗೆ ವಹಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಮೂಲ ಆರೋಪಿಗಳ ಬಂಧನಕ್ಕೆ ಪ್ರಯತ್ನಿಸಿ ಉಡುಪಿ ಜಿಲ್ಲೆಗೆ ಹಾಗು ಭಾಸ್ಕರ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಒದಗಿಸಲು ಕ್ರಮವಹಿಸಿದ್ದಾರೆ.
ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ತನಿಖೆಯನ್ನು ನಿಸ್ಪಕ್ಷಪಾತವಾಗಿ ನಡೆಸುವಂತೆ ಆಗ್ರಹಿಸಿ ಭಾಸ್ಕರ್ ಶೆಟ್ಟಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮತ್ತು ಬಂಡ ಸಮುದಾಯ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಅವರ ಮನವಿಯಂತೆ ಸಿಐಡಿ ತನಿಖೆಗೆ ಒಪ್ಪಿಸುವಂತೆ ಸಚಿವ ಪ್ರಮೋದ್ ಮಧ್ವರಾಜ್ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದರು.
ಇದಕ್ಕೆ ಗೃಹ ಇಲಾಖೆಯಿಂದ ಉತ್ತರ ಬಂದಿದೆ ಎನ್ನಲಾಗಿದ್ದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂಬ ಮಾಹಿತಿಯಿದೆ.
ಒಟ್ಟಿನಲ್ಲಿ ದಿನಕ್ಕೊಂದು ಆರೋಪ ಪ್ರತ್ಯಾರೋಪಗಳ ನಡುವೆಯೇ ಗೊಂದಲವನ್ನು ಮೂಡಿಸುತ್ತಿರುವ ಭಾಸ್ಕರ್ ಶೆಟ್ಟಿ ಮರ್ಡರ್ ಕೇಸ್ ಇನ್ನಾದರೂ ಒಂದು ತಾರ್ಕಿಕ ಅಂತ್ಯ ಕಾಣಬಹುದೇ ಕಾದುನೋಡಬೇಕಿದೆ.
Comments are closed.